ADVERTISEMENT

ಮಹಾರಾಷ್ಟ್ರದಲ್ಲಿ ಮತ್ತಿಬ್ಬರಿಗೆ ಓಮೈಕ್ರಾನ್; ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಡಿಸೆಂಬರ್ 2021, 14:47 IST
Last Updated 6 ಡಿಸೆಂಬರ್ 2021, 14:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಕೊರೊನಾ ವೈರಾಣುವಿನ ಹೊಸ ರೂಪಾಂತರ ತಳಿ ಓಮೈಕ್ರಾನ್‌ನ ಇನ್ನೆರಡು ಪ್ರಕರಣಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿವೆ ಎಂದು ಅಲ್ಲಿನ ಸರ್ಕಾರಿ ಮೂಲಗಳು ತಿಳಿಸಿವೆ.

ಈ ಕುರಿತು ಸುದ್ದಿ ಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಓಮೈಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆಯಾಗಿವೆ.

ದಕ್ಷಿಣ ಆಫ್ರಿಕಾದಿಂದ ಹಿಂತಿರುಗಿದ 37 ವರ್ಷದ ವ್ಯಕ್ತಿ ಮತ್ತು ಅಮೆರಿಕದಿಂದ ಹಿಂತಿರುಗಿದ ಆತನ 36 ವರ್ಷದ ಗೆಳೆಯನಿಗೆ ಓಮೈಕ್ರಾನ್ ಸೋಂಕು ಇರುವುದು ದೃಢಪಟ್ಟಿದೆ ಎಂದು ತಿಳಿಸಿದೆ.

ದೇಶದಲ್ಲಿ ಡಿಸೆಂಬರ್ 5, ಭಾನುವಾರದಂದು ಒಂದೇ ದಿನದಲ್ಲಿ 17 ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.