ADVERTISEMENT

ಭಾರತದಲ್ಲಿ ಕೊರೊನಾ ಸೋಂಕು:  24 ಗಂಟೆಗಳಲ್ಲಿ 704 ಹೊಸ ಪ್ರಕರಣ, 28 ಸಾವು 

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2020, 16:16 IST
Last Updated 6 ಏಪ್ರಿಲ್ 2020, 16:16 IST
ಕೊರೊನಾ ವೈರಸ್‌ ಸೋಂಕಿತರ ಸಂಖ್ಯೆ ಏರಿಕೆ
ಕೊರೊನಾ ವೈರಸ್‌ ಸೋಂಕಿತರ ಸಂಖ್ಯೆ ಏರಿಕೆ   

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟಿರುವ 704 ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಈವರೆಗೆ ಒಂದೇ ದಿನದಲ್ಲಿ ದಾಖಲಾಗಿರುವ ಅತಿ ಹೆಚ್ಚು ಪ್ರಕರಣಗಳ ಪ್ರಮಾಣಇದಾಗಿದೆ.

704 ಹೊಸ ಪ್ರಕರಣಗಳ ಜೊತೆಗೆ ದೇಶದಲ್ಲಿ ಒಟ್ಟು ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 4,281ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 28 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು 4,281 ಪ್ರಕರಣಗಳ ಪೈಕಿ ಸಾವಿಗೀಡಾದವರ ಸಂಖ್ಯೆ 111 ಮುಟ್ಟಿದೆ. ದೇಶದಾದ್ಯಂತ ಈವರೆಗೆ 318 ಮಂದಿ ಕೋವಿಡ್‌–19 ಪೀಡಿತರು ಗುಣಮುಖರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.