ADVERTISEMENT

ಏಪ್ರಿಲ್ 27ರಂದು ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ವಿಡಿಯೊ ಕಾನ್ಫರೆನ್ಸ್

ಏಜೆನ್ಸೀಸ್
Published 22 ಏಪ್ರಿಲ್ 2020, 13:43 IST
Last Updated 22 ಏಪ್ರಿಲ್ 2020, 13:43 IST
ಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
ಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)   

ನವದೆಹಲಿ:ಇದೇ 27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಲಿದ್ದಾರೆ.

ಕೊರೊನಾ ವೈರಸ್ ಸೋಂಕು (ಕೋವಿಡ್–19) ನಿಯಂತ್ರಣ ಮತ್ತು ಸೋಂಕು ಹರಡುವಿಕೆ ತಡೆಯುವ ಸಲುವಾಗಿ ಜಾರಿಯಲ್ಲಿರುವ ಲಾಕ್‌ಡೌನ್ ಪರಿಣಾಮ‌ಗಳ ಬಗ್ಗೆ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಪರಾಮರ್ಶೆ ನಡೆಸಲಿದ್ದಾರೆ.

ಈ ವಿಚಾರಗಳಿಗೆ ಸಂಬಂಧಿಸಿ ಈಗಾಗಲೇ ಎರಡು ಬಾರಿ ಪ್ರಧಾನಿಯವರು ಮುಖ್ಯಮಂತ್ರಿಗಳ ಜತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ.ಮಾರ್ಚ್‌ 24ರಂದು ಮೊದಲ ಬಾರಿ ದೇಶದಾದ್ಯಂತ ಲಾಕ್‌ಡೌನ್ ನಿರ್ಧಾರ ಪ್ರಕಟಿಸುವ ಮುನ್ನ, ಮಾರ್ಚ್‌ 20ರಂದು ಮುಖ್ಯಮಂತ್ರಿಗಳ ಜತೆ ಮೋದಿ ಸಭೆ ನಡೆಸಿದ್ದರು.

ADVERTISEMENT

21 ದಿನಗಳ ಲಾಕ್‌ಡೌನ್ ಮುಕ್ತಾಯವಾಗುವುದಕ್ಕೂ ಮುನ್ನ ನಡೆಸಿದ್ದ ಮತ್ತೊಂದು ಸಭೆಯಲ್ಲಿ, ಲಾಕ್‌ಡೌನ್ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದಕ್ಕೆ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಮರ್ಪಿಸಿದ್ದರು. ಹಾಗೂ ಒಗ್ಗಟ್ಟಿನಿಂದ ಕೊರೊನಾ ವಿರುದ್ಧ ಹೋರಾಡೋಣ ಎಂದು ಕರೆ ನೀಡಿದ್ದರು. ಸೋಂಕಿನ ಹರಡುವಿಕೆ ಕಡಿಮೆಯಾಗದ ಹಿನ್ನೆಲೆಯಲ್ಲಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್‌ಡೌನ್ ವಿಸ್ತರಣೆಗೆ ಮನವಿ ಮಾಡಿದ್ದರು. ಬಳಿಕ ಲಾಕ್‌ಡೌನ್ ಅನ್ನು ಮೇ 3ರ ವರೆಗೆ ವಿಸ್ತರಿಸುವ ಬಗ್ಗೆ ಮೋದಿ ನಿರ್ಧಾರ ಕೈಗೊಂಡಿದ್ದರು.

ಈ ಮಧ್ಯೆ, ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ದೇಶದಾದ್ಯಂತ ಕಳೆದ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 1,486 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. 49 ಜನ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.