ADVERTISEMENT

ಕೊರೊನಾ: ದೇಶದಲ್ಲಿ ಸೋಂಕು ಪೀಡಿತರ ಸಂಖ್ಯೆ 277ಕ್ಕೆ ಏರಿಕೆ

ಏಜೆನ್ಸೀಸ್
Published 21 ಮಾರ್ಚ್ 2020, 6:52 IST
Last Updated 21 ಮಾರ್ಚ್ 2020, 6:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೋಲ್ಕತ್ತ/ನವದೆಹಲಿ:ಕರ್ನಾಟಕ ಮತ್ತುಪಶ್ಚಿಮ ಬಂಗಾಳದಲ್ಲಿ ಶನಿವಾರ ತಲಾ ಒಂದು ಕೊರೊನಾವೈರಸ್‌ (ಕೊವಿಡ್‌–19) ಸೋಂಕು ಪ್ರಕರಣ ದೃಢಪಟ್ಟಿದೆ. ಪಶ್ಚಿಮ ಬಂಗಾಳದಲ್ಲಿ ದಾಖಲಾದ ಮೂರನೇ ಪ್ರಕರಣ ಇದಾಗಿದ್ದರೆ, ಕರ್ನಾಟಕದಲ್ಲಿ 16ನೇ ಪ್ರಕರಣವಾಗಿದೆ. ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಈವರೆಗೆ ದೇಶದಾದ್ಯಂತ ಸೋಂಕುಪೀಡಿತರ ಸಂಖ್ಯೆ 277ಕ್ಕೆ ಏರಿಕೆಯಾಗಿದೆ.

ಪಶ್ಚಿಮ ಬಂಗಾಳದ ‘25 ಪರಗಣ’ ಜಿಲ್ಲೆಯ ಹಬ್ರಾ ಪ್ರದೇಶದ ಮಹಿಳೆಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಶುಕ್ರವಾರವಷ್ಟೆ ಇಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ಈ ಮಧ್ಯೆ,ಕರ್ನಾಟಕದಚಿಕ್ಕಬಳ್ಳಾಪುರಜಿಲ್ಲೆಯ ಗೌರಿಬಿದನೂರು ಪಟ್ಟಣದ ಇಬ್ಬರಲ್ಲಿ ಕೊರೊನಾ ವೈರಸ್ ಸೋಂಕು ತಗುಲಿದ ಲಕ್ಷಣಗಳು ಕಂಡುಬಂದಿದ್ದು, ಶಂಕಿತರನ್ನು ಬೆಂಗಳೂರಿನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ADVERTISEMENT

‘ನಿರ್ಣಾಯಕ ಹಂತದಲ್ಲಿದ್ದೇವೆ’: ಕೊರೊನಾ ವೈರಸ್ ಸೋಂಕು ತಡೆಗಟ್ಟುವ ವಿಚಾರದಲ್ಲಿ ನಾವು ನಿರ್ಣಾಯಕ ಹಂತದಲ್ಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳ ಜತೆ ಅವರು ಗುರುವಾರ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿ, ‘ಜನರು ಆತಂಕಪಡುವ ಅಗತ್ಯವಿಲ್ಲ. ಆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಕರೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.