ADVERTISEMENT

ಓಮೈಕ್ರಾನ್ ಭೀತಿ: ಮಧ್ಯ ಪ್ರದೇಶದಲ್ಲಿ ರಾತ್ರಿ ಕರ್ಫ್ಯೂ ಜಾರಿ

ಪಿಟಿಐ
Published 24 ಡಿಸೆಂಬರ್ 2021, 2:00 IST
Last Updated 24 ಡಿಸೆಂಬರ್ 2021, 2:00 IST
ಶಿವರಾಜ್ ಸಿಂಗ್ ಚೌಹಾಣ್ – ಪಿಟಿಐ ಚಿತ್ರ
ಶಿವರಾಜ್ ಸಿಂಗ್ ಚೌಹಾಣ್ – ಪಿಟಿಐ ಚಿತ್ರ   

ಭೋಪಾಲ್: ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮೈಕ್ರಾನ್ ಹರಡುವಿಕೆ ಭೀತಿ ಹೆಚ್ಚಾಗಿರುವ ಬೆನ್ನಲ್ಲೇ ಮಧ್ಯ ಪ್ರದೇಶ ಸರ್ಕಾರವು ಗುರುವಾರ ರಾತ್ರಿಯಿಂದ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ. ರಾತ್ರಿ 11ರಿಂದ ಬೆಳಿಗ್ಗೆ 5ರ ವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಕೋವಿಡ್–19 ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜನರಿಗೆ ಸೂಚಿಸಲಾಗಿದೆ. ಮಧ್ಯ ಪ್ರದೇಶದಲ್ಲಿ ಈವರೆಗೆ ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿಲ್ಲ.

‘ಜಗತ್ತಿನಾದ್ಯಂತ ಓಮೈಕ್ರಾನ್ ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ಎಚ್ಚರಿಕೆ ವಹಿಸಲು ಇದು ಸರಿಯಾದ ಸಮಯ. ಕೇಂದ್ರ ಸರ್ಕಾರ ಕೂಡ ಮಾರ್ಗಸೂಚಿ ಪ್ರಕಟಿಸಿದೆ. ಹೀಗಾಗಿ ನಾವು ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದೇವೆ. ಅಗತ್ಯವೆನಿಸಿದಲ್ಲಿ ಇನ್ನಷ್ಟು ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ರಾಜ್ಯದಲ್ಲಿ ಯಾವುದೇ ಕೋವಿಡ್ ಪ್ರಕರಣ ಪತ್ತೆಯಾದರೂ ಸೋಂಕಿತರಿಗೆ ಪ್ರತ್ಯೇಕ ವಾಸ, ಮನೆಯಲ್ಲೇ ಪ್ರತ್ಯೇಕ ವಾಸಕ್ಕೆ ಅವಕಾಶವಿಲ್ಲದಿದ್ದರೆ ಆಸ್ಪತ್ರೆಗೆ ದಾಖಲಾತಿ ಮಾಡಿಕೊಳ್ಳುವುದು ಸೇರಿದಂತೆ ಹಲವು ಕ್ರಮಗಳನ್ನು ಮಧ್ಯ ಪ್ರದೇಶ ಸರ್ಕಾರ ಕೈಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.