ADVERTISEMENT

ಕಾರ್ಪೊರೇಟ್‌ ತೆರಿಗೆ ಕಡಿತದಿಂದಾಗಿ ಉದ್ಯೋಗವಕಾಶ ಸೃಷ್ಟಿ: ನರೇಂದ್ರ ಮೋದಿ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2019, 14:17 IST
Last Updated 20 ಸೆಪ್ಟೆಂಬರ್ 2019, 14:17 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ದೇಶಿಯ ಹಾಗೂ ಹೊಸದಾಗಿ ಸ್ಥಾಪನೆಯಾಗುವ ಕಂಪನಿಗಳ ಮೇಲಿನ ಕಾರ್ಪೊರೇಟ್‌ ತೆರಿಗೆಯನ್ನು ಕಡಿತ ಮಾಡಿರುವ ವಿತ್ತ ಸಚಿವಾಲಯದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಕಾರ್ಪೊರೇಟ್ ತೆರಿಗೆ ಕಡಿತ ಮಾಡುವುದರಿಂದ ಬಹುರಾಷ್ಟ್ರ ಕಂಪನಿಗಳು ಖಾಸಗಿ ಹೂಡಿಕೆ ಮಾಡುತ್ತವೆ. ಇದರಿಂದಾಗಿ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.

ವಿತ್ತ ಸಚಿವಾಲಯದ ಈ ನಿರ್ಧಾರವನ್ನು ಐತಿಹಾಸಿಕ ಎಂದು ಬಣ್ಣಿಸಿದ ಮೋದಿ, ತೆರಿಗೆ ಕಡಿತ ಮಾಡಿದ್ದರಿಂದ ಮೇಕ್ ಇನ್ ಇಂಡಿಯಾ ಕಾರ್ಯಕ್ರಮಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದೆ.

ADVERTISEMENT

ಕಾರ್ಪೊರೇಟ್ ತೆರಿಗೆ ಐತಿಹಾಸಿಕ ನಡೆ. ಇದು ಮೇಕ್ ಇನ್ ಇಂಡಿಯಾ ಕಾರ್ಯಕ್ರಮಕ್ಕೆ ಉತ್ತೇಜನ ನೀಡುವುದರ ಜತೆಗೆ ಖಾಸಗಿ ಹೂಡಿಕೆಯನ್ನು ಆಕರ್ಷಿಸುತ್ತದೆ. ನಮ್ಮ ಖಾಸಗಿ ವಲಯದಲ್ಲಿ ಇದು ಸ್ಪರ್ಧೆ ಸೃಷ್ಟಿಸುತ್ತದೆ. ಹೆಚ್ಚಿನ ಉದ್ಯೋಗವಕಾಶಗಳು ಸೃಷ್ಟಿಯಾಗುವುದರಿಂದ 130 ಕೋಟಿ ಭಾರತೀಯರಿಗೆ ಇದು ವಿನ್- ವಿನ್ ಅವಕಾಶ ಎಂದು ಮೋದಿ ಟ್ವೀಟಿಸಿದ್ದಾರೆ. ಅದೇ ವೇಳೆಸರ್ಕಾರದ ಈ ನಿರ್ಧಾರವು ₹5 ಲಕ್ಷ ಕೋಟಿ ಡಾಲರ್ಆರ್ಥಿಕತೆ ಸಾಧಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:6 ವರ್ಷಗಳಲ್ಲಿನ ಕನಿಷ್ಠ ಮಟ್ಟಕ್ಕೆ ತಲುಪಿದೆ ಆರ್ಥಿಕ ವೃದ್ಧಿ ದರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.