ನವದೆಹಲಿ: ‘2014ರ ಜುಲೈನಿಂದ ಇಲ್ಲಿಯವರೆಗೂ 320 ಭ್ರಷ್ಟ ಅಧಿಕಾರಿಗಳಿಗೆ ಅವಧಿಪೂರ್ವ ನಿವೃತ್ತಿ ನೀಡಲಾಗಿದೆ’ ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್ ಬುಧವಾರ ಮಾಹಿತಿ ನೀಡಿದರು.
ಲೋಕಸಭೆಯಲ್ಲಿ ಈ ಕುರಿತು ಲಿಖಿತ ಮಾಹಿತಿ ನೀಡಿರುವ ಅವರು, ‘ಜುಲೈ 2014ರಿಂದ 2020 ಜನವರಿಯವರೆಗೆ163 ಗ್ರೂಪ್ ‘ಎ’ ಅಧಿಕಾರಿಗಳು ಹಾಗೂ 157 ಗ್ರೂಪ್ ‘ಬಿ’ ಅಧಿಕಾರಿಗಳ ವಿರುದ್ಧ ಈ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಉಲ್ಲೇಖಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.