ನವದೆಹಲಿ: ವೈದ್ಯಕೀಯ ವೆಚ್ಚ ಏರಿಕೆಯಾಗುವುದನ್ನು ನಿಯಂತ್ರಿಸಲು ರಾಷ್ಟ್ರೀಯ ಆಯೋಗವನ್ನು ಸ್ಥಾಪಿಸಬೇಕೆಂದು ಕೋರಿ ಸಿಪಿಐ ಸಂಸದ ಸಂತೋಷ್ ಕುಮಾರ್ ಅವರು ಶುಕ್ರವಾರ ರಾಜ್ಯಸಭೆಯಲ್ಲಿ ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಿದ್ದಾರೆ.
ಭಾರತದಲ್ಲಿ ಚಿಕಿತ್ಸಾ ವೆಚ್ಚವು ಶೇ7.21ರಷ್ಟು ಹೆಚ್ಚಾಗಿದೆ ಎಂದು ಅವರು ಮಸೂದೆಯಲ್ಲಿ ಉಲ್ಲೇಖಿಸಿದ್ದಾರೆ.
ಈ ಆಯೋಗವು ವೈದ್ಯಕೀಯ ವೆಚ್ಚ ಹೆಚ್ಚಳದ ಮೇಲೆ ನಿಗದಿತವಾಗಿ ನಿಗಾ ವಹಿಸಬೇಕು ಮತ್ತು ಔಷಧಗಳ ವೆಚ್ಚ, ರೋಗ ಪತ್ತೆಗಾಗಿ ನಡೆಸುವ ಪರೀಕ್ಷೆಗಳ ವೆಚ್ಚಗಳನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದೂ ಅವರು ಆಶಯ ವ್ಯಕ್ತಪಡಿಸಿದ್ದಾರೆ.
ಆರೋಗ್ಯ ವೆಚ್ಚವು ಪ್ರತಿ ವರ್ಷ ಏರಿಕೆಯಾಗುತ್ತಿರುವುದರ ಪರಿಣಾಮ ಮಧ್ಯಮ ವರ್ಗದವರಿಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲು ಕಷ್ಟವಾಗುತ್ತಿದೆ ಎಂದು ಸಂತೋಷ್ ಕುಮಾರ್ ಅವರು ಮಂಡಿಸಿರುವ ಮಸೂದೆಯಲ್ಲಿ ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.