ಚಂದ್ರನ ದಕ್ಷಿಣ ಧ್ರುವದ ಅಂಗಳದ ಮೇಲೆ ವಿಕ್ರಮ್ ಲ್ಯಾಂಡರ್ ಇಳಿಯುವ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಬೆಂಗಳೂರಿನಲ್ಲಿರುವ ಜವಾಹರಲಾಲ್ ನೆಹರು ತಾರಾಲಯದಲ್ಲಿ ಬೃಹತ್ ಪರದೆ ಅಳವಡಿಸಲಾಗಿದೆ. ರಾಜ್ಯದ ಬೇರೆ ಬೇರೆ ಭಾಗಗಳಿಂದ ಈ ಕ್ಷಣವನ್ನು ಕಣ್ಣು ತುಂಬಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಿದ್ದಾರೆ. ಬಂದಂತಹ ಜನರಿಗೆ ಕುಳಿತುಕೊಳ್ಳುವುದಕ್ಕೆ ಆಸನದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.