ರಾಂಚಿ: ನವೆಂಬರ್ 3ರಂದು ದುಮಕಾಮತ್ತು ಬೆರಮೊ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯ ಮತ ಎಣಿಕೆ ಮಂಗಳವಾರ ಬೆಳಗ್ಗೆ 8 ಗಂಟೆಗೆ ಶುರು ಆಗಿದೆ.
ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಿದ್ದು, ಎಲ್ಲ ಕೇಂದ್ರಗಳು ಸಿಸಿಟಿವಿ ನಿಗಾದಲ್ಲಿದೆ ಎಂದು ರಾಜ್ಯದ ಚುನಾವಣಾ ಅಧಿಕಾರಿ ಹೀರಾಲಾಲ್ ಮಂಡಲ್ ಹೇಳಿದ್ದಾರೆ.
ಮತ ಎಣಿಕೆ ಕೇಂದ್ರಗಳಲ್ಲಿ ಕೋವಿಡ್ -19 ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.
ದುಮಕಾದಲ್ಲಿ18 ಸುತ್ತು ಮತ ಎಣಿಕೆ ನಡೆಯಲಿದ್ದು ಬೆರಮೊದಲ್ಲಿ 17 ಸುತ್ತುಗಳ ಮತ ಎಣಿಕೆ ನಡೆಯಲಿದೆ. ಸಂಜೆ 3 ಗಂಟೆಯ ಹೊತ್ತಿಗೆ ಮತ ಎಣಿಕೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.