ADVERTISEMENT

ದೇಶಕ್ಕೆ ಇನ್ನೂ 600 ವೈದ್ಯಕೀಯ ಕಾಲೇಜು, ಏಮ್ಸ್‌ನಂಥ 50 ಸಂಸ್ಥೆಗಳ ಅಗತ್ಯ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅಭಿಮತ

ಪಿಟಿಐ
Published 25 ಸೆಪ್ಟೆಂಬರ್ 2021, 11:13 IST
Last Updated 25 ಸೆಪ್ಟೆಂಬರ್ 2021, 11:13 IST
ನಿತಿನ್ ಗಡ್ಕರಿ
ನಿತಿನ್ ಗಡ್ಕರಿ   

ಪುಣೆ: ‘ದೇಶದಲ್ಲಿ ಇನ್ನೂ ಕನಿಷ್ಠ 600 ವೈದ್ಯಕೀಯ ಕಾಲೇ‌ಜುಗಳು, ಏಮ್ಸ್‌ ಮಾದರಿಯ 50 ಸಂಸ್ಥೆಗಳು ಮತ್ತು 200 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಅಗತ್ಯವಿದೆ’ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕರಾದ್ ಪಟ್ಟಣದಲ್ಲಿ ಕೋವಿಡ್‌–19 ಸೇನಾನಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಾರ್ವಜನಿಕ– ಖಾಸಗಿ ಸಹಭಾಗಿತ್ವದಲ್ಲಿ ಮೂಲಸೌಕರ್ಯಗಳ ಕ್ಷೇತ್ರಗಳಲ್ಲಿ ಹೂಡಿಕೆ ಮಾದರಿಯಲ್ಲೇ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲೂ ಇಂಥ ಸಹಭಾಗಿತ್ವದ ಅಗತ್ಯವಿದೆ. ಈ ನಿಟ್ಟಿನಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸೌಲಭ್ಯಗಳನ್ನು ಕಲ್ಪಿಸುವತ್ತ ಸಹಕಾರ ಕ್ಷೇತ್ರವು ಗಮನಹರಿಸಬೇಕಿದೆ’ ಎಂದರು.

ಸರ್ಕಾರ ಕೂಡ ವೈದ್ಯಕೀಯ–ಶಿಕ್ಷಣ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಸಂಸ್ಥೆಗಳಿಗೆ ಸಹಾಯ ಮಾಡುವ ಚಿಂತನೆ ಹೊಂದಿದೆ’ ಎಂದೂ ಅವರು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.