ADVERTISEMENT

ಮುಂದಿನ 3 ವರ್ಷಗಳಲ್ಲಿ ದೇಶ ನಕ್ಸಲಿಸಂನಿಂದ ಮುಕ್ತವಾಗಲಿದೆ: ಅಮಿತ್ ಶಾ

ಪಿಟಿಐ
Published 20 ಜನವರಿ 2024, 10:41 IST
Last Updated 20 ಜನವರಿ 2024, 10:41 IST
<div class="paragraphs"><p>ಅಮಿತ್ ಶಾ</p></div>

ಅಮಿತ್ ಶಾ

   

(ಚಿತ್ರ ಕೃಪೆ ಪಿಟಿಐ)

ತೇಜ್‌ಪುರ(ಅಸ್ಸಾಂ): ಮುಂದಿನ ಮೂರು ವರ್ಷಗಳಲ್ಲಿ ದೇಶವು ನಕ್ಸಲಿಸಂನಿಂದ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಪ್ರತಿಪಾದಿಸಿದರು.

ADVERTISEMENT

ತೇಜ್‌ಪುರ ಸಮೀಪದ ಸಲೋನಿಬರಿಯಲ್ಲಿ ಸಶಸ್ತ್ರ ಸೀಮಾ ಬಲ(SSB)ದ 60ನೇ ಪುನರುತ್ಥಾನ ದಿನವನ್ನು ಉದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಎಲ್ಲಾ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ, ಸಂಸ್ಕೃತಿ, ಇತಿಹಾಸ, ಭೂಗೋಳ ಮತ್ತು ಭಾಷೆಯನ್ನು ಸೂಕ್ಷ್ಮವಾಗಿ ಸಂಯೋಜಿಸುವಲ್ಲಿ ಮತ್ತು ಗಡಿ ಪ್ರದೇಶಗಳಲ್ಲಿ ಜನರನ್ನು ಹತ್ತಿರಕ್ಕೆ ತರುವಲ್ಲಿ ಎಸ್‌ಎಸ್‌ಬಿ ವಿಶಿಷ್ಟ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದರು.

ಮುಂದಿನ ಮೂರು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶವು ನಕ್ಸಲ್ ಸಮಸ್ಯೆಯಿಂದ ಶೇ 100 ರಷ್ಟು ಮುಕ್ತವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಗೃಹ ಸಚಿವರು ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.