ADVERTISEMENT

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಸ್ಫೋಟ: ದಂಪತಿ ಸಾವು

ಪಿಟಿಐ
Published 14 ಜನವರಿ 2026, 14:33 IST
Last Updated 14 ಜನವರಿ 2026, 14:33 IST
   

ಹಜಾರಿಬಾಗ್‌: ಜಾರ್ಖಂಡ್‌ನ ಹಜಾರಿಬಾಗ್‌ನ ಹಬೀಬಿನಗರ ಪ್ರದೇಶದಲ್ಲಿ ಬುಧವಾರ ಸಂಜೆ ನಾಲ್ಕು ಗಂಟೆ ಆಸುಪಾಸಿನಲ್ಲಿ ನಡೆದ ಸ್ಫೋಟದಲ್ಲಿ ದಂಪತಿ ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.

ಸ್ಫೋಟಕ್ಕೆ ಕಾರಣ ಗೊತ್ತಾಗಿಲ್ಲ. ವಿಧಿ ವಿಜ್ಞಾನ ಪರೀಕ್ಷೆ ನಡೆಸುವವರ ತಂಡವನ್ನು ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾರಾ ಬಜಾರ್ ಪಟ್ಟಣದ ಹೊರವಲಯದಲ್ಲಿರುವ ಹಬೀಬಿ ನಗರದಲ್ಲಿ ನಡೆದ ಸ್ಫೋಟದಲ್ಲಿ ದಂಪತಿ ಮೃತಪಟ್ಟಿದ್ದು, ಗಾಯಾಳುವನ್ನು ಹಜಾರಿಬಾಗ್‌ನ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸದರ್ ಎಸ್‌ಡಿಪಿಒ ಅಮಿತ್ ಕುಮಾರ್ ಆನಂದ್ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.