ADVERTISEMENT

ಎನ್‌ಇಪಿ ಅಳವಡಿಕೆಗೆ ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್

ಪಿಟಿಐ
Published 9 ಮೇ 2025, 16:00 IST
Last Updated 9 ಮೇ 2025, 16:00 IST
<div class="paragraphs"><p>ಸುಪ್ರೀಂ ಕೋರ್ಟ್</p></div>

ಸುಪ್ರೀಂ ಕೋರ್ಟ್

   

ನವದೆಹಲಿ: ತಮ್ಮ ರಾಜ್ಯಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಅಳವಡಿಸುವಂತೆ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಕೇರಳ ಸರ್ಕಾರಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಎನ್‌ಇಪಿ ಅಳವಡಿಸಿಕೊಳ್ಳುವಂತೆ ನ್ಯಾಯಾಲಯವು ಯಾವುದೇ ರಾಜ್ಯವನ್ನು ಒತ್ತಾಯಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಆರ್. ಮಹಾದೇವನ್ ಅವರಿದ್ದ ಪೀಠವು ಅರ್ಜಿದಾರ ಜಿ.ಎಸ್. ಮಣಿ ಅವರಿಗೆ ತಿಳಿಸಿದೆ.

ADVERTISEMENT

‘ಕ್ಷಮಿಸಿ, ಈ ಬಗ್ಗೆ ನಾವು ಯಾವುದೇ ಆದೇಶ ನೀಡಲು ಸಾಧ್ಯವಿಲ್ಲ. ಎನ್‌ಇಪಿ– 2020ರಂತಹ ನೀತಿಯನ್ನು ಅಳವಡಿಸಿಕೊಳ್ಳುವಂತೆ ನ್ಯಾಯಾಲಯವು ಯಾವುದೇ ರಾಜ್ಯವನ್ನು ನೇರವಾಗಿ ಒತ್ತಾಯಿಸುವಂತಿಲ್ಲ’ ಎಂದು ಪೀಠ ಹೇಳಿತು.

ಆದರೆ, ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ರಾಜ್ಯವು ತೆಗೆದುಕೊಳ್ಳುವ ಕ್ರಮ ಅಥವಾ ಅದರ ನಿಷ್ಕ್ರಿಯತೆಯು ಯಾವುದೇ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದರೆ ಆಗ ಮಧ್ಯಪ್ರವೇಶಿಸುತ್ತೇವೆ ಎಂದು ಸ್ಪಷ್ಟಪಡಿಸಿದೆ. 

ಕೇಂದ್ರ ಸರ್ಕಾರದ ಎನ್‌ಇಪಿ ಮತ್ತು ‘ತ್ರಿಭಾಷಾ ಸೂತ್ರ’ವನ್ನು ತಮಿಳುನಾಡು, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಜಾರಿಗೆ ತರಲು ನಿರ್ದೇಶನ ನೀಡುವಂತೆ ಕೋರಿ ತಮಿಳುನಾಡು ಮೂಲದ ವಕೀಲ ಮತ್ತು ಬಿಜೆಪಿ ನಾಯಕ ಮಣಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.