ಮುಂಬೈ (ಪಿಟಿಐ): ಉದ್ಯಮಿ ಮುಖೇಶ್ ಅಂಬಾನಿ ನಿವಾಸದ ಸಮೀಪ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ, ಜಾಮೀನು ಕೋರಿದ್ದ ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅರ್ಜಿಯನ್ನು ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ದೋಷಾರೋಪ ಪಟ್ಟಿಯನ್ನು ಇನ್ನೊಂದು ತಿಂಗಳಲ್ಲಿ ದಾಖಲಿಸಬೇಕು ಎಂದೂ ಎನ್‌ಐಎಗೆ ಸೂಚಿಸಿದೆ.
ದೋಷಾರೋಪ ಪಟ್ಟಿ ಸಲ್ಲಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಎರಡು ತಿಂಗಳ ಸಮಯ ನೀಡಿ ಜೂನ್ 9ರಂದು ಆದೇಶಿಸಿತ್ತು. ತನಿಖೆ ಪ್ರಗತಿಯಲ್ಲಿದ್ದು, ಅವಧಿ ವಿಸ್ತರಿಸಲು ಕೋರಿ ತನಿಖಾ ಸಂಸ್ಥೆಯು ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸಿತ್ತು.
ನಿಗದಿತ ಅವಧಿಯಲ್ಲಿ ಆರೋಪಪಟ್ಟಿ ದಾಖಲಿಸಲು ತನಿಖಾ ಸಂಸ್ಥೆಯು ವಿಫಲವಾಗಿದೆ ಎಂಬ ಕಾರಣವನ್ನೇ ನೀಡಿ ವಾಜೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಪ್ರಕರಣ ಸಂಬಂಧ ಮಾರ್ಚ್ 13, 2021ರಲ್ಲಿ ಇವರನ್ನು ಬಂಧಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.