ADVERTISEMENT

ಜೆಎನ್‌ಯು ಪ್ರಕರಣ:ಎಫ್‌ಐಆರ್ ದಾಖಲಿಸಲುಕೋರಿದ್ದ ಅರ್ಜಿ ವಜಾ

ಪಿಟಿಐ
Published 30 ಅಕ್ಟೋಬರ್ 2020, 12:53 IST
Last Updated 30 ಅಕ್ಟೋಬರ್ 2020, 12:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಜವಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಕಳೆದ ಜನವರಿಯಲ್ಲಿನಡೆದಿದ್ದ ದಾಂದಲೆ, ಹಲ್ಲೆ ಪ್ರಕರಣ ಕುರಿತು ಎಫ್‌ಐಆರ್ ದಾಖಲಿಸಲು ಕೋರಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ.

ದಾಂದಲೆ ಪ್ರಕರಣದಲ್ಲಿ ಗಾಯಗೊಂಡಿದ್ದ ಪ್ರೊಫೆಸರ್ ಸುಚರಿತಾ ಸೆನ್‌ ಅವರು ಈ ಸಂಬಂಧ ಅರ್ಜಿ ಸಲ್ಲಿಸಿದ್ದರು. ಘಟನೆ ಸಂಬಂಧ ಈಗಾಗಲೇ ಮೊಕದ್ದಮೆ ದಾಖಲಾಗಿದೆ ಎಂದು ಉಲ್ಲೇಖಿಸಿದ ಕೋರ್ಟ್ ಶುಕ್ರವಾರ ಈ ಅರ್ಜಿಯನ್ನು ತಿರಸ್ಕರಿಸಿತು. ಇದಕ್ಕೂ ಮೊದಲು ಪೊಲೀಸರು ಸಲ್ಲಿಸಿದ್ದ ವಸ್ತುಸ್ಥಿತಿ ವರದಿಯನ್ನು ಕೋರ್ಟ್‌ ಪರಿಶೀಲಿಸಿತು.

ವಸ್ತುಸ್ಥಿತಿ ವರದಿ ಅನುಸಾರ ಅರ್ಜಿದಾರರು ಸೇರಿ ಹಲವರು ಗಾಯಗೊಂಡಿದ್ದಾರೆ. ಈ ಸಂಬಂಧ ಈಗಾಗಲೇ ಮೊಕದ್ದಮೆ ದಾಖಲಾಗಿದೆ ಎಂಬುದನ್ನು ಕೋರ್ಟ್‌ ಉಲ್ಲೇಖಿಸಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.