ADVERTISEMENT

ಗೂಢಚರ್ಯೆ ಪ್ರಕರಣ:ರಾಜೀವ್‌ ಶರ್ಮಾ ಮತ್ತಿತರರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಪಿಟಿಐ
Published 21 ಸೆಪ್ಟೆಂಬರ್ 2020, 8:07 IST
Last Updated 21 ಸೆಪ್ಟೆಂಬರ್ 2020, 8:07 IST
ರಾಜೀವ್‌ ಶರ್ಮಾ
ರಾಜೀವ್‌ ಶರ್ಮಾ   

ನವದೆಹಲಿ: ರಕ್ಷಣಾ ಇಲಾಖೆಯದಾಖಲೆಗಳನ್ನು ಹೊಂದಿದ್ದ ಆರೋಪದ ಮೇರೆಗೆ ಅಧಿಕೃತ ಗೌಪ್ಯತಾ ಕಾಯ್ದೆಯಡಿಬಂಧಿಸಲಾದ್ದ ಫ್ರೀಲಾನ್ಸ್‌ ಪತ್ರಕರ್ತ ರಾಜೀವ್‌ ಶರ್ಮಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯ ಇನ್ನೂ ಏಳು ದಿನಗಳವರೆಗೆ ವಿಸ್ತರಿಸಿದೆ.

ಈ ಪ್ರಕರಣದ ವಿಚಾರಣೆ ನಡೆಸಿದ ದೆಹಲಿಯ ಮೆಟ್ರೋಪಾಲಿಟನ್ ಮುಖ್ಯನಾಯಮೂರ್ತಿ ಪವನ್ ಸಿಂಗ್ ರಾಜಾವತ್ ಅವರು, ರಾಜೀವ್‌ ಶರ್ಮಾ ಸೇರಿದಂತೆ, ಈ ಪ್ರಕರಣದಲ್ಲಿ ಬಂಧಿಸಲಾಗಿದ್ದ ಚೀನಾದ ಮಹಿಳೆ ಮತ್ತು ನೇಪಾಳದ ವ್ಯಕ್ತಿಯ ನ್ಯಾಯಾಂಗ ಬಂಧನ ಅವಧಿಯನ್ನೂ ಏಳುದಿನಗಳವರೆಗೆ ವಿಸ್ತರಿಸಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಸೇನಾ ನಿಯೋಜನೆ, ಶಸ್ತ್ರಾಸ್ತ್ರ ಖರೀದಿ ಹಾಗೂ ವಿದೇಶಾಂಗ ನೀತಿಗಳ ಕುರಿತು ಚೀನಾ ಗುಪ್ತಚರ ಸಂಸ್ಥೆಗಳಿಗೆ ಮಾಹಿತಿ ರವಾನಿಸುತ್ತಿದ್ದರು ಎನ್ನುವ ಆರೋಪದಡಿ ಸೆ.14ರಂದು ಶರ್ಮಾ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಈ ವೇಳೆ ಅವರ ಬಳಿ ರಕ್ಷಣಾ ಇಲಾಖೆಗೆ ಸಂಬಂಧಿಸಿದ ರಹಸ್ಯ ದಾಖಲೆಗಳು ಪತ್ತೆಯಾಗಿದ್ದವು ಎಂದು ಪೊಲೀಸರು ತಿಳಿಸಿದ್ದರು.

ADVERTISEMENT

ಚೀನಾ ಮೂಲದ ಮಹಿಳೆ ಮತ್ತು ನೇಪಾಳದ ವ್ಯಕ್ತಿಯು ಶೆಲ್‌ ಕಂಪೆನಿಯ ಮೂಲಕ ರಾಜೀವ್‌ ಶರ್ಮಾಗೆ ದೊಡ್ಡ ಮೊತ್ತದ ಹಣ ವರ್ಗಾವಣೆ ಮಾಡಿದ್ದರು ಎಂಬ ಕಾರಣಕ್ಕೆ ಅವರನ್ನು ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.