ADVERTISEMENT

ಗಣಿ ಆರೋಪಿ ಜನಾರ್ದನರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡಿದ ನ್ಯಾಯಾಲಯ

​ಪ್ರಜಾವಾಣಿ ವಾರ್ತೆ
Published 7 ಜೂನ್ 2019, 11:37 IST
Last Updated 7 ಜೂನ್ 2019, 11:37 IST
   

ನವದೆಹಲಿ: ಬಹುಕೋಟಿ ವಂಚನೆ ಆರೋಪಿ ಜನಾರ್ದನರೆಡ್ಡಿ ಬಳ್ಳಾರಿಗೆ ಪ್ರವೇಶಿಸಲು ಸುಪ್ರೀಂಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಜೂನ್ 8ರಿಂದ ಎರಡು ವಾರಗಳ ಕಾಲ ಭೇಟಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಹಾಗೂ ನ್ಯಾಯಮೂರ್ತಿ ಅಜಯ್ ರಸ್ತೋಗಿ ಈ ಆದೇಶ ನೀಡಿದ್ದಾರೆ.
ತನ್ನ ಮಾವನವರನ್ನು ಬಳ್ಳಾರಿ ಜಿಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಆರೋಗ್ಯ ವಿಚಾರಿಸಲು ನಾನು ಹೋಗಬೇಕಾಗಿದೆ, ಅದಕ್ಕಾಗಿ ಅನುಮತಿ ನೀಡಬೇಕು ಎಂದು ಜನಾರ್ದನ ರೆಡ್ಡಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.
ರೆಡ್ಡಿ ಪರ ವಕೀಲ ಎಸ್.ಗಣೇಶ್ ಅರ್ಜಿ ಸಲ್ಲಿಸಿದ್ದ ಮನವಿಯಲ್ಲಿ, ಬಳ್ಳಾರಿ ಜಿಲ್ಲೆ ಪ್ರವೇಶಿಸಲುಜನಾರ್ದನರೆಡ್ಡಿ ಅವರಿಗೆ ವಿಧಿಸಿರುವ ನಿರ್ಬಂಧವನ್ನು ತೆಗೆದುಹಾಕಬೇಕು ಎಂದು ಮನವಿ ಮಾಡಿಕೊಂಡಿದ್ದರು. ಆದರೆ, ನ್ಯಾಯಾಲಯ ಈ ಮನವಿಯಲ್ಲಿ ತಿರಸ್ಕರಿಸಿದೆ.
ತನಿಖಾ ತಂಡಗಳಿಗೆ ತರಾಟೆ:₹ 35 ಸಾವಿರ ಕೋಟಿ ಗಣಿ ಹಗರಣಕ್ಕೆ ಸಂಬಂಧಿಸಿದಂತೆ ಇನ್ನೂ ಯಾಕೆ ಆರೋಪಪಟ್ಟಿ ಸಲ್ಲಿಸಿಲ್ಲ. ಹಾಗೂ ವಿಚಾರಣೆ ಯಾಕೆ ಆರಂಭಿಸಿಲ್ಲ ಎಂದು ನ್ಯಾಯಾಲಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.