ADVERTISEMENT

ನವಾಬ್‌ ಮಲಿಕ್‌ಗೆ ತಾತ್ಕಾಲಿಕ ಜಾಮೀನು ನೀಡಲು ನಕಾರ

ಪಿಟಿಐ
Published 13 ಮೇ 2022, 11:14 IST
Last Updated 13 ಮೇ 2022, 11:14 IST
ನವಾಬ್‌ ಮಲಿಕ್‌
ನವಾಬ್‌ ಮಲಿಕ್‌   

ಮುಂಬೈ: ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಹಾರಾಷ್ಟ್ರದ ಮಾಜಿ ಗೃಹಸಚಿವ ನವಾಬ್‌ ಮಲಿಕ್‌ ಅವರಿಗೆ, ವೈದ್ಯಕೀಯ ಕಾರಣಗಳಿಗಾಗಿ ತಾತ್ಕಾಲಿಕವಾಗಿ ಜಾಮೀನು ನೀಡಲು ಇಲ್ಲಿನ ವಿಶೇಷ ಕೋರ್ಟ್‌ ನಿರಾಕರಿಸಿದೆ. ಆದರೆ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಅನುಮತಿ ನೀಡಿದೆ.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಆರ್‌. ಎನ್‌. ರೋಕಡೆ ಅವರು, ಚಿಕಿತ್ಸೆ ವೇಳೆ ಮಲಿಕ್‌ ಪುತ್ರಿ ಹಾಜರಿರಬಹುದು ಎಂದು ತಿಳಿಸಿದರು. ಮಲಿಕ್‌ ಅವರನ್ನು ಚಿಕಿತ್ಸೆಗೆ ಕರೆದೊಯ್ಯದಿರುವುದಕ್ಕೆ ಜಾರಿ ನಿರ್ದೇಶನಾಲಯವನ್ನು (ಇಡಿ) ತರಾಟೆಗೆ ತೆಗೆದುಕೊಂಡರು.

ಭೂಗತಪಾತಕಿದಾವೂದ್‌ ಇಬ್ರಾಹಿಂ ಹಾಗೂ ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಫೆಬ್ರುವರಿ 23ರಂದು ನವಾಬ್‌ ಮಲಿಕ್ ಅವರನ್ನು ಬಂಧಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.