ನವದೆಹಲಿ: ಮಾಲೇಗಾಂವ್ ಸ್ಫೋಟ ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್‌ಗೆ ಆದೇಶ ನೀಡಿದೆ. ಸಂಸತ್ ಕಲಾಪಗಳಲ್ಲಿ ಭಾಗವಹಿಸಬೇಕಾಗಿರುವುದರಿಂದ ಜೂನ್ 3 ಮತ್ತು 7ರಂದು ನಡೆಯುವ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಆ ವಿಷಯದಲ್ಲಿ ನನಗೆ ವಿನಾಯಿತಿ ನೀಡಬೇಕು ಎಂದು ಸಾಧ್ವಿ ಪ್ರಜ್ಞಾ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.
ಈ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು ವಿಚಾರಣೆಗೆ ಹಾಜರಾಗಲು ಆದೇಶಿಸಿದೆ.
ಮಾಲೇಗಾಂವ್ ಸ್ಫೋಟದ ಆರೋಪಿಯಾಗಿರುವ ಪ್ರಜ್ಞಾ ಸಿಂಗ್ ಠಾಕೂರ್ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.