ಜ್ಯೋತಿ ಮಲ್ಹೋತ್ರಾ
ಹಿಸಾರ್ : ಬೇಹುಗಾರಿಕೆ ಆರೋಪದ ಪ್ರಕರಣದಲ್ಲಿ ಬಂಧಿತರಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರನ್ನು ನ್ಯಾಯಾಲಯವು ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
ಕಸ್ಟಡಿಯ ಅವಧಿ ಮುಗಿದಿದ್ದರಿಂದ ಪೊಲೀಸರು ಜ್ಯೋತಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಮತ್ತೆ ಕಸ್ಟಡಿಗೆ ಕೋರದಿದ್ದರಿಂದ, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಆದೇಶಿಸಿ, ಜೈಲಿಗೆ ಕಳಿಸಿತು.
ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದ್ದ ಮಲ್ಹೋತ್ರಾ ಅವರ ಮೂರು ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ನ ಡೇಟಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
‘ಸುಮಾರು 10–12 ಟೆರಾಬೈಟ್ ಡೇಟಾವನ್ನು ಮರು ಪಡೆಯಲಾಗಿದೆ. ಈ ಕುರಿತಂತೆ ಹೆಚ್ಚಿನ ತನಿಖೆ ನಡೆದಿದೆ’ ಎಂದು ಹೇಳಿವೆ.
ಜ್ಯೋತಿ ಅವರ ನಾಲ್ಕು ಬ್ಯಾಂಕ್ ಖಾತೆಗಳಲ್ಲಿನ ಹಣ ವರ್ಗಾವಣೆಯ ಪರಿಶೀಲನೆಯೂ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.