ಹೈದರಾಬಾದ್: ರೂಪಾಂತರಗೊಂಡಿರುವ ಕೊರೊನಾ ವೈರಸ್‌ನಿಂದಾಗುವ ಸೋಂಕಿನ ವಿರುದ್ಧವೂ ಕೋವ್ಯಾಕ್ಸಿನ್ ರಕ್ಷಣೆ ಒದಗಿಸಲಿದೆ ಎಂದು ಈ ಲಸಿಕೆಯನ್ನು ಅಭಿವೃದ್ಧಿಪಡಿಸಿರುವ ಭಾರತ್ ಬಯೋಟೆಕ್‌ನ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಲ್ಲಾ ಮಂಗಳವಾರ ಹೇಳಿದರು.
‘ಕೊರೊನಾ ವೈರಸ್ ಇನ್ನೂ ಹಲವು ಬಾರಿ ರೂಪಾಂತರಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಎಷ್ಟೇ ಸ್ವರೂಪಗಳನ್ನು ಪಡೆದರೂ ಈ ವೈರಸ್ ವಿರುದ್ಧ ಕೋವ್ಯಾಕ್ಸಿನ್ ರಕ್ಷಣೆ ಒದಗಿಸಲಿದೆ’ ಎಂದೂ ಹೇಳಿದರು.
ಸಿಎಸ್‌ಐಆರ್ ಮತ್ತು ಇನ್‌ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ಸಹಯೋಗದಲ್ಲಿ ಹಮ್ಕಿಕೊಂಡಿದ್ದ ಆನ್‌ಲೈನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ತುರ್ತು ಸಂದರ್ಭಗಳಲ್ಲಿ ಈ ಲಸಿಕೆಯನ್ನು ಬಳಸಲು ಅನುಮತಿ ನೀಡುವಂತೆ ಸಂಬಂಧಪಟ್ಟ ಇಲಾಖೆ, ಸಂಸ್ಥೆಗಳಿಗೆ ಮನವಿ ಮಾಡಲಾಗಿದೆ’ ಎಂದರು.
‘ಲಸಿಕೆಯ ಮೂರನೇ ಹಂತದ ಟ್ರಯಲ್ ಪ್ರಗತಿಯಲ್ಲಿದೆ. 20,000 ಸ್ವಯಂಸೇವಕರು ಈ ಕಾರ್ಯಕ್ರಮದ ಭಾಗವಾಗಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.