ADVERTISEMENT

ಕೋವಿಡ್: ಒಂದು ದಿನದಲ್ಲಿ 120 ಹೊಸ ಪ್ರಕರಣ, ಒಂದು ಸಾವು

ಪಿಟಿಐ
Published 20 ಫೆಬ್ರುವರಿ 2023, 6:55 IST
Last Updated 20 ಫೆಬ್ರುವರಿ 2023, 6:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 120 ಕೊರೊನಾ ವೈರಸ್‌ ಸೋಂಕಿತರು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,916 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ವರದಿ ನೀಡಿದೆ.

ದೇಶದ ಒಟ್ಟು ಸೋಂಕಿತರ ಸಂಖ್ಯೆ 4.46 ಕೋಟಿಗೇರಿದೆ. ಒಂದು ದಿನದ ಅವಧಿಯಲ್ಲಿ ಕೇರಳದಲ್ಲಿ ವ್ಯಕ್ತಿಯೊಬ್ಬರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಕೋವಿಡ್‌ನಿಂದ ಸತ್ತವರ ಸಂಖ್ಯೆ 5,30,761 ಕ್ಕೆ ಹೆಚ್ಚಾಗಿದೆ.

ದೇಶದ ಒಟ್ಟು ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.01ರಷ್ಟಿದೆ. ರಾಷ್ಟ್ರೀಯ ಕೋವಿಡ್-19 ಚೇತರಿಕೆ ದರವು ಶೇಕಡಾ 98.81 ರಷ್ಟು ಏರಿಕೆ ಕಂಡಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,41,52,360 ಕ್ಕೆ ಏರಿಕೆಯಾಗಿದೆ.

ADVERTISEMENT

ಕೋವಿಡ್ ಸೋಂಕು ನಿಯಂತ್ರಿಸಲು ರಾಷ್ಟ್ರವ್ಯಾಪಿ ಕೋವಿಡ್–19 ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 220.63 ಕೋಟಿ ಡೋಸ್‌ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯದ ವೆಬ್‌ಸೈಟ್ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.