ಕೊರೊನಾ ವೈರಾಣು– ಸಾಂಕೇತಿಕ ಚಿತ್ರ
ನವದೆಹಲಿ: ಕಳೆದ 48 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 769 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 6 ಸಾವಿರ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಬಿಡುಗಡೆ ಮಾಡಿದ ಅಂಕಿಅಂಶದಲ್ಲಿ ತಿಳಿಸಿದೆ.
ನೆರೆಯ ಕೇರಳದಲ್ಲಿ ಅತಿ ಹೆಚ್ಚು ಮಂದಿಗೆ ಸೋಂಕು ತಗುಲಿದೆ. ನಂತರದ ಸ್ಥಾನಗಳಲ್ಲಿ ಗುಜರಾತ್, ಪಶ್ಚಿಮ ಬಂಗಾಳ ಮತ್ತು ದೆಹಲಿ ಇವೆ. ಸಕ್ರಿಯ 6,133 ಪ್ರಕರಣಗಳಿದ್ದು, 24 ಗಂಟೆಯಲ್ಲಿ ಸೋಂಕಿನಿಂದ ಆರು ಜನ ಮೃತಪಟ್ಟಿದ್ದಾರೆ. ಈ ವರ್ಷ ಜನವರಿಯಿಂದ ಸೋಂಕಿನಿಂದ 65 ಜನ ಮೃತಪಟ್ಟಿದ್ದಾರೆ ಎಂದು ಸಚಿವಾಲಯ ಹೇಳಿದೆ.
ಕೊರೊನಾ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಲ್ಲಿ ಐಸೋಲೇಷನ್ ಬೆಡ್, ಆಕ್ಸಿಜನ್, ವೆಂಟಿಲೇಟರ್ಸ್ ಸೇರಿದಂತೆ ಅಗತ್ಯ ಔಷಧಗಳ ಇರುವಿಕೆ ಬಗ್ಗೆ ಖಚಿತಪಡಿಸಿಕೊಳ್ಳುವಂತೆ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.