ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 26,567 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. 385 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ದೇಶದಲ್ಲಿ ಈವರೆಗೆ ಸೋಂಕು ತಗುಲಿರುವವರ ಒಟ್ಟು ಸಂಖ್ಯೆ 97,03,770 ತಲುಪಿದೆ. ಒಟ್ಟು 1,40,958 ಮಂದಿ ಮೃತಪಟ್ಟಿದ್ದಾರೆ.
ಒಂದೇ ದಿನ 39,045 ಸೋಂಕಿತರು ಚೇತರಿಸಿಕೊಂಡಿದ್ದು, ಸದ್ಯ ದೇಶದಲ್ಲಿ 3,83,866 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 91,78,946 ಮಂದಿ ಗುಣಮುಖರಾಗಿದ್ದಾರೆ.
ಮಹಾರಾಷ್ಟ್ರದಲ್ಲಿ 76,852 ಸಕ್ರಿಯ ಪ್ರಕರಣಗಳಿವೆ. ಇದರೊಂದಿಗೆ ಮಹಾರಾಷ್ಟ್ರವು ದೇಶದಲ್ಲೇ ಅತಿಹೆಚ್ಚು ಸಕ್ರಿಯ ಪ್ರಕರಣಗಳಿರುವ ರಾಜ್ಯವಾಗಿದೆ. ಕೇರಳದಲ್ಲಿ 59,607 ಸಕ್ರಿಯ ಪ್ರಕರಣಗಳಿವೆ.
ದಿನವೊಂದರಲ್ಲಿ 50 ಸಾವಿರಕ್ಕಿಂತಲೂ ಕಡಿಮೆ ಪ್ರಕರಣಗಳು ದೇಶದಲ್ಲಿ ವರದಿಯಾಗುತ್ತಿರುವುದು ಇದು 32ನೇ ದಿನವಾಗಿದೆ. ನವೆಂಬರ್ 7ರಂದು 50 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು.
ಈವರೆಗೆ ಒಟ್ಟು 17.77 ಕೋಟಿಗೂ ಹೆಚ್ಚು ಕೊರೊನಾ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 8,01,081 ಮಾದರಿಗಳನ್ನು ಸೋಮವಾರ ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.