ADVERTISEMENT

Covid India Updates: ಒಂದೇ ದಿನದಲ್ಲಿ 2,527 ಹೊಸ ಕೋವಿಡ್‌ ಪ್ರಕರಣಗಳು ವರದಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2022, 15:13 IST
Last Updated 23 ಏಪ್ರಿಲ್ 2022, 15:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್‌ ಉಲ್ಬಣಗೊಂಡಿದ್ದು, ಒಂದೇ ದಿನದಲ್ಲಿ2,527 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ4,30,54,952ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳೂ15,079ಕ್ಕೆ ಹೆಚ್ಚಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ‌33 ಮಂದಿ ಮೃತಪಟ್ಟಿದ್ದು, ಸೋಂಕಿನಿಂದಾಗಿ ಅಸುನೀಗಿದವರ ಸಂಖ್ಯೆ5,22,149ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಒಟ್ಟು ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳು ಶೇಕಡ0.04 ರಷ್ಟು ಪಾಲನ್ನು ಹೊಂದಿದೆ. ರಾಷ್ಟ್ರೀಯ ಚೇತರಿಕೆ ಪ್ರಮಾಣವು ಶೇಕಡ98.75 ರಷ್ಟಿದೆ. ದೈನಂದಿನ ಸೋಂಕು ದೃಢ ಪ್ರಮಾಣವು0.56 per ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ADVERTISEMENT

ದೇಶದಾದ್ಯಂತ ಈವರೆಗೆ187.46 ಕೋಟಿ ಡೋಸ್‌ ಲಸಿಕೆಯನ್ನು ವಿತರಿಸಲಾಗಿದೆ. ದೇಶದಲ್ಲಿ ಈವರೆಗೆ5,22,149 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಈ ಪೈಕಿ ಮಹಾರಾಷ್ಟ್ರದಲ್ಲಿ1,47,831, ಕೇರಳದಲ್ಲಿ 68,781, ಕರ್ನಾಟಕದಲ್ಲಿ40,057 ಜನರು ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.