ADVERTISEMENT

ಕೊರೊನಾ: ಮಹಾರಾಷ್ಟ್ರದಲ್ಲಿ 470 ಹೊಸ ಪ್ರಕರಣ

ಸಕ್ರಿಯ ಪ್ರಕರಣಗಳ ಸಂಖ್ಯೆ 2,175ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 25 ಮೇ 2022, 15:16 IST
Last Updated 25 ಮೇ 2022, 15:16 IST
ಪ್ರಾತಿನಿಧಿಕ ಚಿತ್ರ –ಪಿಟಿಐ
ಪ್ರಾತಿನಿಧಿಕ ಚಿತ್ರ –ಪಿಟಿಐ   

ಮುಂಬೈ: ಎರಡು ತಿಂಗಳ ಬಳಿಕ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಅಲ್ಪಮಟ್ಟಿಗೆ ಏರಿಕೆಯಾಗಿದೆ. ಬುಧವಾರ ರಾಜ್ಯದಲ್ಲಿ 470 ಪ್ರಕರಣಗಳು ಪತ್ತೆಯಾಗಿವೆ.

ಈ ಪೈಕಿ ಮುಂಬೈ ಮಹಾನಗರ ಪಾಲಿಕೆ ಪ್ರದೇಶದಲ್ಲಿ 372, ಪುಣೆಯಲ್ಲಿ 68 ಪ್ರಕರಣಗಳು ದೃಢಪಟ್ಟಿವೆ ಎಂದು ಸಾರ್ವಜನಿಕ ಆರೋಗ್ಯ ಇಲಾಖೆ ತಿಳಿಸಿದೆ.

ಹೊಸ ಸೋಂಕಿತರೂ ಸೇರಿ ರಾಜ್ಯದಲ್ಲಿಸಕ್ರಿಯ ಪ್ರಕರಣಗಳ ಸಂಖ್ಯೆ 2,175ಕ್ಕೆ ಹೆಚ್ಚಿದೆ.ಈ ಮೂಲಕ ಈವರೆಗೆ ಕೋವಿಡ್ ಸೋಂಕಿಗೆ ತುತ್ತಾದವರ ಸಂಖ್ಯೆ 78,83,818ಕ್ಕೆ ಏರಿಕೆಯಾಗಿದೆ. ಒಟ್ಟು ಮೃತಪಟ್ಟವರ ಸಂಖ್ಯೆ1,47,857 ತಲುಪಿದೆ. ಚೇತರಿಕೆ ಪ್ರಮಾಣ ಶೇ 98ರಷ್ಟಿದೆ.

ADVERTISEMENT

ಮಹಾರಾಷ್ಟ್ರದಲ್ಲಿಕೊರೊನಾ ಮೂರನೇ ಅಲೆ ಸಂದರ್ಭದಲ್ಲಿ ಅಂದರೆ ಮಾರ್ಚ್ ತಿಂಗಳ ಮೊದಲ ವಾರದಲ್ಲಿ ನಿತ್ಯ 450–550 ಪ್ರಕರಣಗಳು ಪತ್ತೆಯಾಗುತ್ತಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.