ADVERTISEMENT

ಕೋವಿಡ್‌-19: ದೇಶದಲ್ಲಿ 4,041 ಮಂದಿಗೆ ಸೋಂಕು, 21 ಸಾವಿರ ದಾಟಿದ ಸಕ್ರಿಯ ಪ್ರಕರಣ

ಪಿಟಿಐ
Published 3 ಜೂನ್ 2022, 4:21 IST
Last Updated 3 ಜೂನ್ 2022, 4:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರಾಷ್ಟ್ರದಲ್ಲಿ ದೈನಂದಿನ ಕೋವಿಡ್‌-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಹೊಸದಾಗಿ 4,041 ಮಂದಿಗೆ ಸೋಂಕು ತಗುಲಿದೆ. 10 ಮಂದಿ ಕೋವಿಡ್‌ ಕಾರಣದಿಂದ ಮೃತಪಟ್ಟಿದ್ದಾರೆ.

ಇದರೊಂದಿಗೆ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 4,31,68,585ಕ್ಕೆ ತಲುಪಿದೆ. ಮೃತರ ಸಂಖ್ಯೆ ಒಟ್ಟು 5,24,651ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆಗೊಳಿಸಿದ ಮಾಹಿತಿಯಲ್ಲಿ ತಿಳಿಸಿದೆ.

ಒಟ್ಟು 21,177 ಸಕ್ರಿಯ ಕೋವಿಡ್‌ ಪ್ರಕರಣಗಳ ಪೈಕಿ ಕಳೆದ 24 ಗಂಟೆಯಲ್ಲಿ 1,668 ಸಕ್ರಿಯ ಪ್ರಕರಣಗಳು ಸೇರ್ಪಡೆಗೊಂಡಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.