ADVERTISEMENT

ಮಹಾರಾಷ್ಟ್ರದಲ್ಲಿ ಒಂದೇ ದಿನ 1,602, ದೆಹಲಿಯಲ್ಲಿ 472 ಸೋಂಕು ಪ್ರಕರಣ

ಪಿಟಿಐ
Published 14 ಮೇ 2020, 20:48 IST
Last Updated 14 ಮೇ 2020, 20:48 IST
ಕೊರೊನಾ ವೈರಸ್‌ ಪತ್ತೆಗಾಗಿ ರಕ್ತ ಮಾದರಿ ಸಂಗ್ರಹಿಸುತ್ತಿರುವ ಚಿತ್ರ
ಕೊರೊನಾ ವೈರಸ್‌ ಪತ್ತೆಗಾಗಿ ರಕ್ತ ಮಾದರಿ ಸಂಗ್ರಹಿಸುತ್ತಿರುವ ಚಿತ್ರ    

ಮುಂಬೈ: ಮಹಾರಾಷ್ಟ್ರದಲ್ಲಿ ಗುರುವಾರ ಒಂದೇ ದಿನ ಹೊಸದಾಗಿ 1,602 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 27,524ಕ್ಕೆ ತಲುಪಿದೆ. ಜತೆಗೆ44 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದು, ಇವರಲ್ಲಿ 25 ಜನರು ಮುಂಬೈನವರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 1,109ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

512ಜನರು ಗುಣಮುಖರಾಗಿ ಮನೆಗೆ ತೆರಳಿದ್ದು ಈವರೆಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 6,059ತಲುಪಿದೆ.

ದೆಹಲಿ: ಒಂದೇ ದಿನ 472 ಪ್ರಕರಣ
ನವದೆಹಲಿ: ದೆಹಲಿಯಲ್ಲಿ ಗುರುವಾರ 472 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇವು ಒಂದೇ ದಿನದಲ್ಲಿ ವರದಿಯಾದ ಅತಿ ಹೆಚ್ಚಿನ ಪ್ರಕರಣಗಳಾಗಿವೆ.

ADVERTISEMENT

ಕೋವಿಡ್‌ ಪೀಡಿತರ ಒಟ್ಟು ಸಂಖ್ಯೆ 8,470 ಕ್ಕೇರಿದ್ದು, ಸಾವಿನ ಸಂಖ್ಯೆ 115ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ದೆಹಲಿಯಲ್ಲಿ ಮೇ 7ರಂದು ಒಂದೇ ದಿನ 448 ಪ್ರಕರಣಗಳು ದಾಖಲಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.