ADVERTISEMENT

ಜ್ಯೋತಿರಾದಿತ್ಯ ಸಿಂಧಿಯಾಗೆ ಕೋವಿಡ್-19‌ ದೃಢ

ಪಿಟಿಐ
Published 9 ಜೂನ್ 2020, 22:09 IST
Last Updated 9 ಜೂನ್ 2020, 22:09 IST
ಜ್ಯೋತಿರಾದಿತ್ಯ ಸಿಂಧ್ಯ
ಜ್ಯೋತಿರಾದಿತ್ಯ ಸಿಂಧ್ಯ   

ನವದೆಹಲಿ: ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ತಾಯಿ ಮಾಧವಿ ರಾಜೇ ಸಿಂಧಿಯಾ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇವರೂ ದಕ್ಷಿಣ ದೆಹಲಿಯ ಸಾಕೇತ್‌ ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿತ್ತು. ಆದರೆ, ಅವರ ತಾಯಿಗೆ ಯಾವುದೇ ರೋಗ ಲಕ್ಷಣಗಳು ಇರಲಿಲ್ಲ. ಕೆಲವು ದಿನಗಳ ಹಿಂದೆಯಷ್ಟೇ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರಿಗೆ ಕೊರೊನಾ ಸೋಂಕು ಲಕ್ಷಣಗಳು ಕಾಣಿಸಿಕೊಂಡಿದ್ದು, ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದರು. ಸಂಬೀತ್ ಪಾತ್ರಾ ಚೇತರಿಸಿಕೊಂಡಿದ್ದು ಸೋಮವಾರ ಆಸ್ಪತ್ರೆಯಿಂದ ಮನೆಗೆ ವಾಪಸ್‌ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT