ADVERTISEMENT

Covid-19 India Update: ದೇಶದಲ್ಲಿ 60 ದಿನಗಳಲ್ಲಿ ಅತಿ ಕಡಿಮೆ ಹೊಸ ಪ್ರಕರಣಗಳು

ಪಿಟಿಐ
Published 6 ಜೂನ್ 2021, 5:58 IST
Last Updated 6 ಜೂನ್ 2021, 5:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ದೇಶದಲ್ಲಿ 1,14,460 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಇದು 60 ದಿನಗಳಲ್ಲಿ ವರದಿಯಾದ ಅತಿ ಕಡಿಮೆ ಪ್ರಕರಣಗಳಾಗಿವೆ. ಇದರೊಂದಿಗೆ ದೈನಂದಿನ ಸೋಂಕು ದೃಢ ಪ್ರಮಾಣವು ಶೇಕಡ 5.62ಕ್ಕೆ ಇಳಿಕೆಯಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಭಾನುವಾರ ತಿಳಿಸಿದೆ.

‘ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 2,88,09,339ಕ್ಕೆ ಏರಿಕೆಯಾಗಿದೆ. ಇದೇ ಸಂದರ್ಭದಲ್ಲಿ 2,677 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆಯೂ 3,46,759ಕ್ಕೆ ಹೆಚ್ಚಿದೆ. ಅಲ್ಲದೆ ಸಕ್ರಿಯ ಪ್ರಕರಣಗಳ ಸಂಖ್ಯೆ 15 ಲಕ್ಷಕ್ಕಿಂತ ಕಡಿಮೆಯಿದೆ’ ಎಂದು ಸಚಿವಾಲಯವು ಹೇಳಿದೆ.

ಶನಿವಾರ 20,36,311 ‍ಪರೀಕ್ಷೆಗಳನ್ನು ನಡೆಸಲಾಗಿದ್ದು, ಈವರೆಗೆ 36,47,46,522 ‍ಪರೀಕ್ಷೆಗಳನ್ನು ನಡೆಸಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆಯೂ 14,77,799ಕ್ಕೆ ಇಳಿದಿದ್ದು, ಇದು ಒಟ್ಟು ಪ್ರಕರಣಗಳ ಪೈಕಿ ಶೇಕಡ 5.13ರಷ್ಟು ಪಾಲನ್ನು ಹೊಂದಿದೆ. ಸತತ 13 ದಿನಗಳಿಂದಸೋಂಕು ದೃಢ ಪ್ರಮಾಣವು ಶೇಕಡ 10ಕ್ಕಿಂತ ಕಡಿಮೆಯಿದೆ. ದೇಶದ ಚೇತರಿಕೆ ಪ್ರಮಾಣವು ಶೇಕಡ 93.67ಕ್ಕೆ ಹೆಚ್ಚಿದರೆ, ಸಾವಿನ ಪ್ರಮಾಣವು ಶೇಕಡಾ 1.20 ರಷ್ಟಿದೆ.

ADVERTISEMENT

ಈವರೆಗೆ ದೇಶದಲ್ಲಿ ಕೋವಿಡ್‌ ಲಸಿಕೆಯ 23,13,22,417 ಡೋಸ್‌ಗಳನ್ನು ನೀಡಲಾಗಿದೆ. ದೇಶದಲ್ಲಿ 3,46,759 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಪೈಕಿ ಮಹಾರಾಷ್ಟ್ರ (99,512), ಕರ್ನಾಟಕ(31,260),ತಮಿಳುನಾಡು(26,571), ದೆಹಲಿ(24,557), ಉತ್ತರ ಪ್ರದೇಶ( 21,151), ಪಶ್ಚಿಮ ಬಂಗಾಳ(16,152), ಪಂಜಾಬ್‌(15,009), ಚಂಡೀಗಡ (13,192) ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.