ADVERTISEMENT

Covid-19 India Updates: ದೇಶದಲ್ಲಿ 11,427 ಹೊಸ ಪ್ರಕರಣಗಳು ಪತ್ತೆ, 118 ಸಾವು

ಪಿಟಿಐ
Published 1 ಫೆಬ್ರುವರಿ 2021, 7:04 IST
Last Updated 1 ಫೆಬ್ರುವರಿ 2021, 7:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಲ್ಲಿ ಒಂದೇ ದಿನದಲ್ಲಿ 11,427 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಪ್ರಕರಣದ ಸಂಖ್ಯೆ 1,07,57,610ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ ಚೇತರಿಕೆ ಪ್ರಮಾಣವು ಹೆಚ್ಚಾಗಿದ್ದು, ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 1,04,34,983ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

‘ದೇಶದ ಚೇತರಿಕೆ ಪ್ರಮಾಣವು ಶೇಕಡಾ 97ಕ್ಕೆ ಏರಿಕೆಯಾಗಿದೆ. ಹೊಸದಾಗಿ 118 ಮಂದಿ ಸೋಂಕಿನಿಂದಾಗಿ ಸಾವಿಗೀಡಾಗಿದ್ದು, ಈವರೆಗೆ ಒಟ್ಟು 1,54,392 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಸಾವಿನ ಪ್ರಮಾಣವು ಶೇಕಡ 1.44 ರಷ್ಟಿದೆ’ ಎಂದು ಸಚಿವಾಲಯವು ತಿಳಿಸಿದೆ.

‘ಸತತ 13ನೇ ದಿನವೂ ಸಕ್ರಿಯ ಪ್ರಕರಣಗಳ ಸಂಖ್ಯೆ 2 ಲಕ್ಷಕ್ಕಿಂತ ಕಡಿಮೆಯಿದೆ. ಸದ್ಯ ದೇಶದಲ್ಲಿ 1,68,235 ಸಕ್ರಿಯ ಪ್ರಕರಣಗಳಿದ್ದು, ಇದು ಒಟ್ಟು ಪ್ರಕರಣಗಳಲ್ಲಿ ಶೇಕಡ 1.56 ರಷ್ಟು ಭಾಗ’ ಎಂದು ಸಚಿವಾಲಯ ಬಿಡುಗಡೆಗೊಳಿಸಿದ ಅಂಕಿಅಂಶ ಹೇಳಿದೆ.

ADVERTISEMENT

‘ಜನವರಿ 31 ತನಕ 19,70,92,635 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಭಾನುವಾರ 5,04,263 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ’ ಎಂದು ಐಸಿಎಂಆರ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.