ADVERTISEMENT

Covid-19 India Update: ದೇಶದಲ್ಲಿ ಒಂದೇ ದಿನ 14,516 ಜನರಿಗೆ ಸೋಂಕು, 375 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಜೂನ್ 2020, 4:21 IST
Last Updated 20 ಜೂನ್ 2020, 4:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 14,516 ಹೊಸ ಕೋವಿಡ್‌–19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 375 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಈವರೆಗೆ ಒಟ್ಟು 3,95,048 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಮೃತರ ಸಂಖ್ಯೆಯು 12,948ಕ್ಕೆ ಏರಿಕೆಯಾಗಿದೆ.

ಸದ್ಯ 1,68,269 ಪ್ರಕರಣಗಳು ಸಕ್ರಿಯವಾಗಿದ್ದು, 2,13,831 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ADVERTISEMENT

ಕೋವಿಡ್‌-19ನ ಹೊಡೆತಕ್ಕೆ ತೀವ್ರವಾಗಿ ಸಿಲುಕಿರುವ ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 1,24,331 ಪ್ರಕರಣಗಳು ಬೆಳಕಿಗೆ ಬಂದಿದ್ದು, 55,665 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಈವರೆಗೆ 62,773 ಮಂದಿ ಗುಣಮುಖರಾಗಿದ್ದು, 5,893 ಜನರು ಮೃತರಾಗಿದ್ದಾರೆ.

ಗುಜರಾತ್‌ನಲ್ಲಿ ಒಟ್ಟಾರೆ 26,141 ಜನರಿಗೆ ಸೋಂಕು ತಗುಲಿದೆ. 6,364 ಸಕ್ರಿಯ ಪ್ರಕರಣಗಳಿದ್ದು, 18,159 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ 1,618 ಜನರು ಮೃತಪಟ್ಟಿದ್ದಾರೆ.

ದೆಹಲಿಯಲ್ಲಿ ಒಟ್ಟಾರೆ 53,116 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 27,512 ಸಕ್ರಿಯ ಪ್ರಕರಣಗಳಿದ್ದು, 23,569 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 2,035 ಮಂದಿ ಮೃತಪಟ್ಟಿದ್ದಾರೆ.

ತಮಿಳುನಾಡಿನಲ್ಲಿ ಒಟ್ಟಾರೆ 54,449 ಮಂದಿಗೆ ಸೋಂಕು ತಗುಲಿದ್ದು, 23,512 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 30,271 ಗುಣಮುಖರಾಗಿದ್ದು, 666 ಮಂದಿ ಮೃತಪಟ್ಟಿದ್ದಾರೆ.

ಇನ್ನುಳಿದಂತೆ ಮಧ್ಯಪ್ರದೇಶದಲ್ಲಿ 495, ಪಶ್ಚಿಮ ಬಂಗಾಳದಲ್ಲಿ 529, ಉತ್ತರ ಪ್ರದೇಶದಲ್ಲಿ 488 ಜನರು ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.