ADVERTISEMENT

Covid-19 India Update: ದೇಶದಲ್ಲಿ ಒಂದೇ ದಿನ 19,459 ಜನರಿಗೆ ಸೋಂಕು, 380 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಜೂನ್ 2020, 4:25 IST
Last Updated 29 ಜೂನ್ 2020, 4:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 19,459 ಹೊಸ ಕೋವಿಡ್‌–19 ಪ್ರಕರಣಗಳು ದೃಢಪಟ್ಟಿದ್ದು, 380 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಈವರೆಗೆ ಒಟ್ಟು 5,48,318 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಮೃತರ ಸಂಖ್ಯೆಯು 16,475ಕ್ಕೆ ಏರಿಕೆಯಾಗಿದೆ.

ಸದ್ಯ 2,10,120 ಪ್ರಕರಣಗಳು ಸಕ್ರಿಯವಾಗಿದ್ದು, 3,21,723 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ADVERTISEMENT

ಕೋವಿಡ್‌-19ನಿಂದ ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 1,64,626 ಪ್ರಕರಣಗಳು ಬೆಳಕಿಗೆ ಬಂದಿದ್ದು, 70,622 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಈವರೆಗೆ 86,575 ಮಂದಿ ಗುಣಮುಖರಾಗಿದ್ದು, 7,429 ಜನರು ಮೃತರಾಗಿದ್ದಾರೆ.

ಗುಜರಾತ್‌ನಲ್ಲಿ ಒಟ್ಟಾರೆ 31,320 ಜನರಿಗೆ ಸೋಂಕು ತಗುಲಿದೆ. 6,712 ಸಕ್ರಿಯ ಪ್ರಕರಣಗಳಿದ್ದು, 22,800 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ 1,808 ಜನರು ಮೃತಪಟ್ಟಿದ್ದಾರೆ.

ದೆಹಲಿಯಲ್ಲಿ ಒಟ್ಟಾರೆ 83,077 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 27,847 ಸಕ್ರಿಯ ಪ್ರಕರಣಗಳಿದ್ದು, 52,607 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 2,623 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ ಒಟ್ಟಾರೆ 82,275 ಮಂದಿಗೆ ಸೋಂಕು ತಗುಲಿದ್ದು, 35,659 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 45,537 ಗುಣಮುಖರಾಗಿದ್ದು, 1,079 ಮಂದಿ ಮೃತಪಟ್ಟಿದ್ದಾರೆ.

ಇನ್ನುಳಿದಂತೆ ಮಧ್ಯಪ್ರದೇಶದಲ್ಲಿ 557, ಪಶ್ಚಿಮ ಬಂಗಾಳದಲ್ಲಿ 639, ಉತ್ತರ ಪ್ರದೇಶದಲ್ಲಿ 660 ಜನರು ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.