ADVERTISEMENT

Covid-19 India Update | ಮಹಾರಾಷ್ಟ್ರದಲ್ಲಿ 5,092 ಹೊಸ ಪ್ರಕರಣ ದಾಖಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ನವೆಂಬರ್ 2020, 15:56 IST
Last Updated 8 ನವೆಂಬರ್ 2020, 15:56 IST
ಪ್ರಾತನಿಧಿಕ ಚಿತ್ರ
ಪ್ರಾತನಿಧಿಕ ಚಿತ್ರ   

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಕೇಂದ್ರಬಿಂದುವೆಂದೇ ಪರಿಗಣಿಸಲ್ಪಟ್ಟಿರುವ ಮಹಾರಾಷ್ಟ್ರದಲ್ಲಿ ಇಂದು (ಭಾನುವಾರ) 5,092 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.

ಇಂದು 8,232 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 110 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಾದ್ಯಂತ 2247 ಹೊಸ ಪ್ರಕರಣಗಳು ದಾಖಲಾಗಿದ್ದು, 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ADVERTISEMENT

ಮಧ್ಯಪ್ರದೇಶದಲ್ಲಿ ಇಂದು 891 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 11 ಮಂದಿ ಸಾವಿಗೀಡಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 45,674 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಕಳೆದ 24 ಗಂಟೆಗಳಲ್ಲಿ 559 ಮಂದಿ ಮೃತಪಟ್ಟಿದ್ದಾರೆ ಮತ್ತು 49,082 ಜನರು ಗುಣಮುಖರಾಗಿದ್ದಾರೆ.

ಇದರೊಂದಿಗೆ ದೇಶದಲ್ಲಿ ಈವರೆಗೆ 85,07,754 ಮಂದಿಗೆ ಸೋಂಕು ತಗುಲಿದ್ದು, 1,26,121 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 78,68,968 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 5,12,665 ಸಕ್ರಿಯ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ನವೆಂಬರ್ 7ರವರೆಗೆ ದೇಶದಲ್ಲಿ 11,77,36,791 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ 11,94,487 ಜನರನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.