ADVERTISEMENT

ಕೋವಿಡ್‌ನಿಂದಾಗಿ ಸಾವು: ನಕಲಿ ಕ್ಲೇಮುಗಳ ಕುರಿತು ತನಿಖೆಗೆ ‘ಸುಪ್ರೀಂ’ ಅನುಮತಿ

ಪಿಟಿಐ
Published 24 ಮಾರ್ಚ್ 2022, 10:54 IST
Last Updated 24 ಮಾರ್ಚ್ 2022, 10:54 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ಕೋವಿಡ್‌ನಿಂದಾಗಿ ಮೃತಪಟ್ಟವರ ಕುಟುಂಬಗಳಿಗೆ ನೀಡುವ ಪರಿಹಾರಕ್ಕಾಗಿ ನಕಲಿ ಕ್ಲೇಮುಗಳು ಸಲ್ಲಿಕೆಯಾಗಿರುವ ಕುರಿತು ತನಿಖೆ ನಡೆಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಗುರುವಾರ ಅನುಮತಿ ನೀಡಿತು.

ನ್ಯಾಯಮೂರ್ತಿಗಳಾದ ಎಂ.ಆರ್‌.ಶಾ ಹಾಗೂ ಬಿ.ವಿ.ನಾಗರತ್ನಾ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.

‘ಮಹಾರಾಷ್ಟ್ರ, ಕೇರಳ, ಗುಜರಾತ್‌ ಹಾಗೂ ಆಂಧ್ರಪ್ರದೇಶದಲ್ಲಿ ಮೃತಪಟ್ಟವರ ಸಂಖ್ಯೆ ಹಾಗೂ ಪರಿಹಾರ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಸಂಖ್ಯೆಗೂ ಭಾರಿ ವ್ಯತ್ಯಾಸ ಇದೆ. ಈ ನಾಲ್ಕು ರಾಜ್ಯಗಳಲ್ಲಿ ಸಲ್ಲಿಕೆಯಾಗಿರುವ ಒಟ್ಟು ಕ್ಲೇಮುಗಳ ಪೈಕಿ ಶೇ 5ರಷ್ಟು ಅರ್ಜಿಗಳನ್ನು ಸರ್ಕಾರ ಪರಿಶೀಲಿಸಬಹುದು’ ಎಂದು ನ್ಯಾಯಪೀಠ ಹೇಳಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.