
ಸಾಂದರ್ಭಿಕ ಚಿತ್ರ
ತಿರುವನಂತಪುರ: ಕೇರಳ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 300 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 3 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತನ್ನ ವೆಬ್‌ಸೈಟ್‌ನಲ್ಲಿ ಗುರುವಾರ ಪ್ರಕಟಿಸಿದೆ.
ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, ಗುರುವಾರ ಬೆಳಗ್ಗೆ 8ಗಂಟೆಗೆ ದೇಶದಾದ್ಯಂತ ಹೊಸದಾಗಿ 358 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 300 ಪ್ರಕರಣಗಳು ಕೇರಳದಲ್ಲೇ ಕಾಣಿಸಿಕೊಂಡಿವೆ.
ಮೂರು ಮಂದಿಯ ಸಾವಿನೊಂದಿಗೆ ರಾಜ್ಯದಲ್ಲಿ ಮೂರು ವರ್ಷಗಳಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 72,059 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಕೋವಿಡ್‌ನಿಂದ 211 ಜನ ಗುಣಮುಖರಾಗಿದ್ದಾರೆ. ಅಲ್ಲಿಗೆ ಒಟ್ಟು ಗುಣಮುಖರಾದವರ ಸಂಖ್ಯೆ 68,37,414.
ರಾಜ್ಯದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ಆಸ್ಫತ್ರೆಗಳು ಸಿದ್ದವಾಗಿರುವುರಿಂದ ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.