ADVERTISEMENT

ಹರಿಯಾಣದಲ್ಲಿ ಇಂದಿನಿಂದ ಒಂದು ವಾರ ಲಾಕ್‌ಡೌನ್‌

ಪಿಟಿಐ
Published 2 ಮೇ 2021, 17:34 IST
Last Updated 2 ಮೇ 2021, 17:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಂಡೀಗಢ: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಹರಿಯಾಣ ಸರ್ಕಾರವು ಮೇ 3ರಿಂದ ಒಂದು ವಾರ ಕಾಲ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಿಸಿದೆ.

ಈ ಹಿಂದೆ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿತ್ತು.

‘ಮೇ 3ರಿಂದ ರಾಜ್ಯದಲ್ಲಿ 7 ದಿನಗಳ ಲಾಕ್‌ಡೌನ್ ಇರುತ್ತದೆ’ ಎಂದು ಹರಿಯಾಣದ ಗೃಹ ಮತ್ತು ಆರೋಗ್ಯ ಸಚಿವ ಅನಿಲ್ ವಿಜ್ ಅವರು ಭಾನುವಾರ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ADVERTISEMENT

ಹರಿಯಾಣದಲ್ಲಿ ಶನಿವಾರ ಕೋವಿಡ್‌ನಿಂದ 125 ಮಂದಿ ಸಾವಿಗೀಡಾಗಿದ್ದಾರೆ. ಕೋವಿಡ್‌ನಿಂದಾಗಿ ರಾಜ್ಯದಲ್ಲಿ ಇದುವರೆಗೆ ಒಟ್ಟು 4,341 ಮಂದಿ ಮೃತಪಟ್ಟಿದ್ದಾರೆ. 13,588 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ದೃಢಪಟ್ಟವರ ಸಂಖ್ಯೆ 5,01,566ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.