ADVERTISEMENT

ಕೋವಿಡ್–19 | ತಮಿಳುನಾಡಿನ ಎಲ್ಲ ಜಿಲ್ಲೆಗಳಿಗೂ ವ್ಯಾಪಿಸಿದ ಸೋಂಕು

​ಪ್ರಜಾವಾಣಿ ವಾರ್ತೆ
Published 2 ಮೇ 2020, 18:30 IST
Last Updated 2 ಮೇ 2020, 18:30 IST
   

ಚೆನ್ನೈ: ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಮೊದಲ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಇದು, ಈವರೆಗೆ ರಾಜ್ಯದ ಏಕೈಕ ಹಸಿರು ವಲಯದ ಜಿಲ್ಲೆಯಾಗಿತ್ತು.

ಇದರೊಂದಿಗೆ ರಾಜ್ಯದ ಎಲ್ಲ 37 ಜಿಲ್ಲೆಗಳಲ್ಲಿಯೂ ಕೊರೊನಾ ಸೋಂಕು ವ್ಯಾಪಿಸಿದಂತಾಗಿದೆ.

ಆಂಧ್ರಪ್ರದೇಶದಿಂದ ಮರಳಿದ್ದ 67 ವರ್ಷದ ವ್ಯಕ್ತಿಗೆ ಸೋಂಕು ಇರುವುದು ಸಾಬೀತಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ತಮಿಳುನಾಡಿನಲ್ಲಿ ಈವರೆಗೆ 28 ಮಂದಿ ಕೋವಿಡ್‌ನಿಂದ ಸತ್ತಿದ್ದಾರೆ. ಚೆನ್ನೈ ಸೇರಿದಂತೆ 12 ಜಿಲ್ಲೆಗಳು ರೆಡ್‌ ಜೋನ್‌ ಆಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.