ನವದೆಹಲಿ: ದೇಶದಾದ್ಯಂತ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 11,919 ಪ್ರಕರಣಗಳು ದೃಢಪಟ್ಟಿವೆ. ಈ ಅವಧಿಯಲ್ಲಿ 470 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆ ತಿಳಿಸಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,44,78,517 ಏರಿಕೆಯಾಗಿದ್ದರೆ, ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 4,64,623ಕ್ಕೆ ಏರಿದೆ. ಪ್ರಸ್ತುತ 1,35,918 ಪ್ರಕರಣಗಳು ಸಕ್ರಿಯವಾಗಿವೆ. ದೇಶದಲ್ಲಿ ಇದುವರೆಗೂ 114.46 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.