ನವದೆಹಲಿ: ಕಳೆದ 201 ದಿನಗಳ ನಂತರ ಮೊದಲ ಬಾರಿಗೆ ದೇಶದಲ್ಲಿ ಕೋವಿಡ್‌ನ ಹೊಸ ಪ್ರಕರಣಗಳ ಸಂಖ್ಯೆ 20 ಸಾವಿರಕ್ಕಿಂತ ಕಡಿಮೆ ದಾಖಲಾಗಿದೆ. ನಿತ್ಯದ ಪಾಸಿಟಿವಿಟಿ ದರ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲೂ ಇಳಿಕೆಯಾಗಿದೆ.
ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18,795 ಹೊಸ ಪ್ರಕರಣಗಳು ವರದಿಯಾಗಿವೆ.
ಸೋಮವಾರ 7,414 ಹೊಸ ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 2,92,206ಕ್ಕೆ ಇಳಿದಿದ್ದು, ಇದು 192 ದಿನಗಳಲ್ಲೇ ದಾಖಲಾಗಿರುವ ಅತ್ಯಂತ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಒಟ್ಟು ಸೋಂಕಿನ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.87ರಷ್ಟಿದೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 179 ಮಂದಿ ಸಾವನ್ನಪ್ಪಿದ್ದಾರೆ. ಇದು 193 ದಿನಗಳಲ್ಲಿ ದಾಖಲಾದ ಅತಿ ಕಡಿಮೆ ಸಾವಿನ ಸಂಖ್ಯೆಯಾಗಿದೆ.ಒಟ್ಟು ಸಾವಿನ ಸಂಖ್ಯೆ 4,47,373 ಎಂದು ಪ್ರಕಟಣೆ ತಿಳಿಸಿದೆ.
ಸೋಮವಾರ 13,21,780 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಇಲ್ಲಿಯವರೆಗೂ ಒಟ್ಟು 56,57,30,031 ಜನರ ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.