ADVERTISEMENT

Covid-19 India Update| ಲಸಿಕೆಯ ಭರವಸೆ, ಕೋವಿಡ್‌ ಪ್ರಕರಣಗಳ ಸಂಖ್ಯೆ ಇಳಿಮುಖ

ಪಿಟಿಐ
Published 30 ಡಿಸೆಂಬರ್ 2020, 15:45 IST
Last Updated 30 ಡಿಸೆಂಬರ್ 2020, 15:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ:ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವ ಬೆನ್ನಲೇ ಸರ್ಕಾರ ಶೀಘ್ರದಲ್ಲಿ ಸೆರಂ ಕಂಪನಿಯ ಲಸಿಕೆ ಬಳಕೆಗೆ ಅನುಮತಿ ನೀಡುವ ಸಾಧ್ಯತೆಗಳಿವೆ.

ಈಗಾಗಲೇ ಬ್ರಿಟನ್ ಸರ್ಕಾರ ತುರ್ತು ಬಳಕೆಗೆ ಅನುಮತಿ ನೀಡಿದೆ. ಈ ಲಸಿಕೆ ಮಾತ್ರವಲ್ಲದೆ ಇನ್ನು ಎರಡು ಲಸಿಕೆಗಳನ್ನು ತುರ್ತು ಬಳಕೆಗೆ ಅನುಮತಿ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ದೇಶದಲ್ಲಿ ಒಂದೇ ದಿನ 20,549 ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,02,44,852ಕ್ಕೆ ಏರಿಕೆಯಾಗಿದೆ. ಹೊಸದಾಗಿ 286 ಮಂದಿ ಮೃತಪಟ್ಟಿದ್ದು, ಸೋಂಕಿನಿಂದಾಗಿ ಇದುವರೆಗೆ ಒಟ್ಟು 1,48,439 ಮಂದಿ ಸಾವನ್ನಪ್ಪಿದ್ದಾರೆ.

ADVERTISEMENT

ಈವರೆಗೆ 98 ಲಕ್ಷಕ್ಕಿಂತ ಹೆಚ್ಚು ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಭಾರತದಲ್ಲಿ ಚೇತರಿಕೆಯ ಪ್ರಮಾಣವು ಶೇಕಡ 95.99 ಹಾಗೂ ಸಾವಿನ ಪ್ರಮಾಣವು ಶೇಕಡ 1.45ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರ ತಿಳಿಸಿದೆ.

ದೇಶದಲ್ಲಿ ಈವರೆಗೆ 98,34,141 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು 2,62,272 ಸಕ್ರಿಯ ಪ್ರಕರಣಗಳಿವೆ. ಇದು ಒಟ್ಟು ಪ್ರಕರಣಗಳ ಪೈಕಿ ಶೇಕಡ 2.56ರಷ್ಟು ಇದೆ. ಸತತ 9ನೇ ದಿನವೂ ಸಕ್ರಿಯ ಪ್ರಕರಣಗಳ ಸಂಖ್ಯೆ 3 ಲಕ್ಷಕ್ಕಿಂತ ಕಡಿಮೆಯಿದೆ ಎಂದು ಸಚಿವಾಲಯವು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.