ADVERTISEMENT

ಕೋವಿಡ್‌: ಒಂದೇ ದಿನದಲ್ಲಿ 21,566 ಹೊಸ ಪ್ರಕರಣ; 45 ಸಾವು

ಪಿಟಿಐ
Published 21 ಜುಲೈ 2022, 16:20 IST
Last Updated 21 ಜುಲೈ 2022, 16:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಸದಲ್ಲಿ ಕೇವಲ ಒಂದೇ ದಿನ 21,566 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದು ಕಳೆದ 152 ದಿನಗಳಲ್ಲೇ ದಾಖಲಾದ ಗರಿಷ್ಠ ಪ್ರಮಾಣವಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 4,38,25,185ಕ್ಕೆ ಏರಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,48,881ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.‌

ಒಂದೇ ದಿನದಲ್ಲಿ 45 ಸೋಂಕಿತರು ಮೃತಪಟ್ಟಿದ್ದು, ಮೃತರ ಒಟ್ಟು ಸಂಖ್ಯೆ 5,25,870ಕ್ಕೆ ಏರಿಕೆಯಾಗಿದೆ.

ಒಟ್ಟು ಸಕ್ರಿಯ ಪ್ರಕರಣಗಳ ದರವು ಶೇ 0.34ರಷ್ಟಿದ್ದರೆ, ಚೇತರಿಕೆ ದರವು ಶೇ 98.46ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರವು ಶೇ 4.25ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರವು ಶೇ 4.51ರಷ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.