ADVERTISEMENT

Covid India Update| ದೇಶದಲ್ಲಿ 42,766 ಹೊಸ ಕೋವಿಡ್‌ ಪ್ರಕರಣಗಳು ಪತ್ತೆ

1,206 ಮಂದಿ ಸಾವು

ಪಿಟಿಐ
Published 10 ಜುಲೈ 2021, 6:04 IST
Last Updated 10 ಜುಲೈ 2021, 6:04 IST
   

ನವದೆಹಲಿ: ‘ದೇಶದಲ್ಲಿ ಶನಿವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 42,766 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 3,07,95,716ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳು 4,55,033ಕ್ಕೆ ಇಳಿಕೆಯಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಶನಿವಾರ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 1,206 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಮೃತರ ಸಂಖ್ಯೆ 4,07,145ಕ್ಕೆ ಹೆಚ್ಚಿದೆ. ದೇಶದ ಒಟ್ಟು ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳು ಶೇಕಡ 1.48ರಷ್ಟು ಪಾಲನ್ನು ಹೊಂದಿದ್ದರೆ, ದೇಶದ ಗುಣಮುಖರಾಗುವವರ ಪ್ರಮಾಣವು ಶೇಕಡ 97.20ರಷ್ಟಿದೆ.

‘ಶುಕ್ರವಾರ 19,55,225 ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದ್ದು, ಈವರೆಗೆ 42,90,41,970 ಮಂದಿಯನ್ನು ಪರೀಕ್ಷಿಸಲಾಗಿದೆ. ದೇಶದಲ್ಲಿ ಪಾಸಿಟಿವಿಟಿ ದರವು ಶೇಕಡ 2.19ಕ್ಕೆ ಇಳಿಕೆಯಾಗಿದೆ. 2,99,33,538 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಮರಣ ದರವು ಶೇಕಡ 1.32ರಷ್ಟಿದೆ’ ಎಂದು ಸಚಿವಾಲಯವು ಹೇಳಿದೆ.

ADVERTISEMENT

ದೇಶದಲ್ಲಿ ಈವರೆಗೆ 37.21 ಕೋಟಿ ಲಸಿಕೆಯ ಡೋಸ್‌ಗಳನ್ನು ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.