ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 62 ಸಾವಿರ ಕೋವಿಡ್ ಪ್ರಕರಣಗಳು ವರದಿಯಾಗಿದ್ದು ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದೆ.
ಕಳೆದ ಎರಡು ಮೂರು ವಾರಗಳ ಹಿಂದೆ ದಿನಕ್ಕೆ 80 ರಿಂದ 90 ಸಾವಿರ ಪ್ರಕರಣಗಳು ವರದಿಯಾಗಿದ್ದವು. ಈ ವಾರದಲ್ಲಿ ಈ ಪ್ರಮಾಣ 60 ಸಾವಿರ ಸಮೀಪಕ್ಕೆ ಇಳಿಕೆಯಾಗಿದೆ.
ಕೋವಿಡ್ 19 ಸೋಂಕಿತರ ಸಂಖ್ಯೆ 74,32,681ಕ್ಕೆ ಏರಿದ್ದು, ಒಂದೇ ದಿನದಲ್ಲಿ 62,212 ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಕೋವಿಡ್ ಪೀಡಿತರಲ್ಲಿ 65 ಲಕ್ಷ ಜನರು ಗುಣಮುಖರಾಗಿದ್ದು ಕೇವಲ 7 ಲಕ್ಷ ಜನರ ಸೋಂಕಿನಿಂದ ಬಳಲುತ್ತಿದ್ದು ದೇಶದ ವಿವಿಧ ಆಸ್ಪತ್ರೆಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೂ 1,12,998 ಜನರ ಸಾವನ್ನಪ್ಪಿದ್ದಾರೆ. ಶುಕ್ರವಾರ ಒಂದೇ ದಿನ 837 ಜನರ ಮೃತಪಟ್ಟಿದ್ದಾರೆ.
ದೇಶದಲ್ಲಿ ಚೇತರಿಕೆ ಪ್ರಮಾಣ ಶೇ 87.56 ರಷ್ಟಿದ್ದು, ಸೋಂಕಿತರ ಪ್ರಮಾಣಕ್ಕಿಂತ, ಚೇತರಿಕೆ ಕಾಣುತ್ತಿರುವವರ ಪ್ರಮಾಣ ಹೆಚ್ಚಾಗಿದೆ. ಕಳೆದ 9 ದಿನಗಳಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 7 ಲಕ್ಷಕ್ಕೆ ಇಳಿದಿದೆ ಎಂದು
ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಪ್ರಸ್ತುತ 7,95,087 ರಷ್ಟು ಸಕ್ರಿಯ ಪ್ರಕರಣಗಳಿವೆ. ಗುಣಮುಖರಾಗಿರುವವರ ಸಂಖ್ಯೆ 65,24,596
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.