ADVERTISEMENT

Covid-19 India Update: ತಮಿಳುನಾಡಿನಲ್ಲಿ 7 ಲಕ್ಷಕ್ಕೂ ಅಧಿಕ ಪ್ರಕರಣಗಳು

ಏಜೆನ್ಸೀಸ್
Published 22 ಅಕ್ಟೋಬರ್ 2020, 15:25 IST
Last Updated 22 ಅಕ್ಟೋಬರ್ 2020, 15:25 IST
ಗಂಟಲು ದ್ರವ ಮಾದರಿ ಸಂಗ್ರಹದ ಸಾಂದರ್ಭಿಕ ಚಿತ್ರ
ಗಂಟಲು ದ್ರವ ಮಾದರಿ ಸಂಗ್ರಹದ ಸಾಂದರ್ಭಿಕ ಚಿತ್ರ   

ನವದೆಹಲಿ: ತಮಿಳುನಾಡಿನಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 3,077 ಹೊಸ ಪ್ರಕರಣಗಳು ದಾಖಲಾಗುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 7 ಲಕ್ಷ ದಾಟಿದೆ. ಚೆನ್ನೈನಲ್ಲಿ ಪ್ರಕರಣಗಳ ಸಂಖ್ಯೆ 2 ಲಕ್ಷ ಸಮೀಪಿಸಿದೆ.

7,00,193 ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ ಈವರೆಗೂ 10,825 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ ತಮಿಳುನಾಡಿನಲ್ಲಿ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದು, ಕಳೆದ 21 ದಿನಗಳಲ್ಲಿ ಒಂದು ಲಕ್ಷ ಪ್ರಕರಣಗಳು ದಾಖಲಾಗಿವೆ. ಪ್ರಕರಣಗಳು ಐದು ಲಕ್ಷದಿಂದ 17 ದಿನಗಳಲ್ಲಿಯೇ 6 ಲಕ್ಷ ಮುಟ್ಟಿತ್ತು. ರಾಜ್ಯದಲ್ಲಿ 6,55,170 ಮಂದಿ ಗುಣಮುಖರಾಗಿದ್ದು, 34,198 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರ, ಆಂಧ್ರ ಪ್ರದೇಶ ಹಾಗೂ ಕರ್ನಾಟಕದಲ್ಲಿ ಈಗಾಗಲೇ ಪ್ರಕರಣಗಳ ಸಂಖ್ಯೆ 7 ಲಕ್ಷ ದಾಟಿದೆ. ಇನ್ನೂ ಬಿಹಾರ, ಮಧ್ಯ ಪ್ರದೇಶ ಹಾಗೂ ತಮಿಳುನಾಡಿನಲ್ಲಿ ಸರ್ಕಾರಗಳು ಉಚಿತವಾಗಿ ಕೋವಿಡ್‌–19 ಲಸಿಕೆ ಪೂರೈಕೆ ಮಾಡುವುದಾಗಿ ಘೋಷಿಸಿಕೊಂಡಿವೆ.

ADVERTISEMENT

ಮಹಾರಾಷ್ಟ್ರದಲ್ಲಿ 7,539 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 16,25,197 ತಲುಪಿದೆ. 14,31,856 ಮಂದಿ ಗುಣಮುಖರಾಗಿದ್ದು, 42,831 ಮಂದಿ ಸಾವಿಗೀಡಾಗಿದ್ದಾರೆ. ಕೇರಳದಲ್ಲಿ 7,482 ಹೊಸ ಪ್ರಕರಣಗಳು ದಾಖಲಾಗುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 3.50 ಲಕ್ಷ ದಾಟಿದೆ. ಈವರೆಗೂ 2,74,675 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಮಧ್ಯ ಪ್ರದೇಶದಲ್ಲಿ 1,045 ಪ್ರಕರಣಗಳು, ಆಂಧ್ರ ಪ್ರದೇಶದಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ 8 ಲಕ್ಷ ಸಮೀಪಿಸಿದೆ.

ಗುರುವಾರ ಬೆಳಗ್ಗಿನ ವರೆಗೂ ದೇಶದ ವಿವಿಧೆಡೆ ಕಳೆದ 24 ಗಂಟೆಗಳ ಅವಧಿಯಲ್ಲಿ 79,415 ಮಂದಿ ಕೋವಿಡ್‌ ಸೋಂಕಿತರು ಚೇತರಿಸಿಕೊಂಡಿದ್ದಾರೆ.

ದೇಶದಾದ್ಯಂತ 55,838 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 702 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 77,06,946ಕ್ಕೆ ಏರಿಕೆಯಾಗಿದೆ. ಈವರೆಗೆ 1,16,616 ಮಂದಿ ಮೃತಪಟ್ಟಿದ್ದಾರೆ.

ಇದುವರೆಗೆ 68,74,518 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ದೇಶದಲ್ಲಿ 7,15,812 ಸಕ್ರಿಯ ಪ್ರಕರಣಗಳು ಇವೆ.

ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 16.1 ಲಕ್ಷ ಮಂದಿಗೆ ಸೋಂಕು ತಗುಲಿದ್ದು, ಆ ಪೈಕಿ 42,453 ಮಂದಿ ಸಾವಿಗೀಡಾಗಿದ್ದಾರೆ. ಆಂಧ್ರಪ್ರದೇಶದಲ್ಲಿ 7.90 ಲಕ್ಷ ಪ್ರಕರಣಗಳು ದಾಖಲಾಗಿದ್ದು, ಇದುವರೆಗೆ 6,481 ಮಂದಿ ಮೃತಪಟ್ಟಿದ್ದಾರೆ.

ಕರ್ನಾಟಕದಲ್ಲಿ ಬುಧವಾರ 5,872 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 7,82,773ಕ್ಕೆ ಏರಿಕೆಯಾಗಿದೆ. ಒಟ್ಟಾರೆ 10,696 ಜನರು ಮೃತಪಟ್ಟಿದ್ದಾರೆ.

ಬುಧವಾರ ಒಂದೇ ದಿನ 14,69,984 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಇದುವರೆಗೆ 9,86,70,363 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.