ADVERTISEMENT

Covid-19 India Update: 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 8,151 ಪ್ರಕರಣಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಅಕ್ಟೋಬರ್ 2020, 16:30 IST
Last Updated 20 ಅಕ್ಟೋಬರ್ 2020, 16:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್‌ ಸೋಂಕು ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದು, ಕಳೆದ 24 ಗಂಟೆಗಳಲ್ಲಿ 8,151 ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 16,09,516ಕ್ಕೆ ಏರಿಕೆಯಾಗಿದ್ದು, 1,74,265 ಸಕ್ರಿಯ ಪ್ರಕರಣಗಳಿವೆ.

ಕೇರಳದಲ್ಲಿ 6,591 ಪ್ರಕರಣಗಳು ವರದಿಯಾಗಿದ್ದು, 91,922 ಸಕ್ರಿಯ ಪ್ರಕರಣಗಳಿವೆ. ತಮಿಳುನಾಡಿನಲ್ಲಿ 4,403 ಮಂದಿ ಗುಣಮುಖರಾಗಿದ್ದಾರೆ ಹಾಗೂ 3,094 ಹೊಸ ಪ್ರಕರಣಗಳು ದಾಖಲಾಗಿವೆ. ದೆಹಲಿಯಲ್ಲಿ 3,579 ಪ್ರಕರಣಗಳು, ಪಶ್ಚಿಮ ಬಂಗಾಳದಲ್ಲಿ 4,029 ಪ್ರಕರಣಗಳು, ಆಂಧ್ರ ಪ್ರದೇಶದಲ್ಲಿ 3,503 ಪ್ರಕರಣಗಳು ದಾಖಲಾಗಿವೆ.

ಮಂಗಳವಾರ ಬೆಳಗ್ಗಿನ ವರೆಗೂ ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 46,791 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 587 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಸಚಿವಾಲಯ ತಿಳಿಸಿದೆ.

ADVERTISEMENT

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 75,97,064 ಕ್ಕೆ ಏರಿಕೆಯಾಗಿದೆ. ಇದುವರೆಗೆ 1,15,197 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ 67,33,329 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 7,48,538 ಸಕ್ರಿಯ ಪ್ರಕರಣಗಳು ದಾಖಲಾಗಿವೆ.

ಕಳೆದ ಮೂರು ದಿನಗಳಿಂದ ಮಹಾರಾಷ್ಟ್ರ, ಕೇರಳ, ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.