ADVERTISEMENT

Covid-19 India Update: 72 ಲಕ್ಷ ಸೋಂಕಿತರು ಗುಣಮುಖ

ಏಜೆನ್ಸೀಸ್
Published 27 ಅಕ್ಟೋಬರ್ 2020, 5:19 IST
Last Updated 27 ಅಕ್ಟೋಬರ್ 2020, 5:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ 72,01,070 ಮಂದಿ ಕೋವಿಡ್‌ ಸೋಂಕಿತರು ಚೇತರಿಸಿಕೊಂಡಿದ್ದಾರೆ.

ಕಳೆದ 24 ಗಂಟೆ ಅವಧಿಯಲ್ಲಿ 36,469 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 488 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 79,46,429ಕ್ಕೆ ಏರಿಕೆಯಾಗಿದೆ. ಆ ಪೈಕಿ 1,19,502 ಸೋಂಕಿತರು ಮೃತಪಟ್ಟಿದ್ದಾರೆ. 72,01,070 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 6,25,857 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ 16.5 ಲಕ್ಷ ಜನರಿಗೆ ಸೋಂಕು ದೃಢಪಟ್ಟಿದೆ. ಆ ಪೈಕಿ 43,264 ಮಂದಿ ಸಾವಿಗೀಡಾಗಿದ್ದಾರೆ. ಆಂಧ್ರಪ್ರದೇಶದಲ್ಲಿ 8.07 ಲಕ್ಷ ಮಂದಿಗೆ ಸೋಂಕು ತಗುಲಿದ್ದು, ಇದುವರೆಗೆ 6,587 ಮಂದಿ ಮೃತಪಟ್ಟಿದ್ದಾರೆ.

ಕರ್ನಾಟಕದಲ್ಲಿ ಸೋಮವಾರ 3,130 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8,05,947ಕ್ಕೆ ಏರಿಕೆಯಾಗಿದೆ. ಆ ಪೈಕೆ 10,947 ಮಂದಿ ಸಾವಿಗೀಡಾಗಿದ್ದಾರೆ. ರಾಜಧಾನಿ ದೆಹಲಿಯಲ್ಲಿ ಇದುವರೆಗೆ 3.57 ಲಕ್ಷ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 6,258 ಮಂದಿ ಮೃತಪಟ್ಟಿದ್ದಾರೆ.

ದೇಶದಾದ್ಯಂತ ಸೋಮವಾರ ಒಂದೇ ದಿನ 9,58,116 ಕೊರೊನಾ ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ. ಇದುವರೆಗೆ 10,44,20,894 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.