ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 10,584 ಮಂದಿಗೆ ಕೋವಿಡ್–19 ಸೋಂಕು ತಗುಲಿದ್ದು, 78 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ಈವರೆಗೆ ಸೋಂಕು ತಗುಲಿದವರ ಸಂಖ್ಯೆ 1,10,16,434 ತಲುಪಿದೆ. ಮೃತರ ಸಂಖ್ಯೆ 1,56,463ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಓದಿ:ಲಸಿಕೆಯಿಂದ ಕೋವಿಡ್ ವಿರುದ್ಧ ದೀರ್ಘಾಕಾಲೀನ ರಕ್ಷಣೆ: ತಜ್ಞರು
ಈವರೆಗೆ 1,07,12,665 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಚೇತರಿಕೆ ಪ್ರಮಾಣ ಶೇ 97.22ರಷ್ಟಿದ್ದು, ಸಾವಿನ ಪ್ರಮಾಣ ಶೇ 1.42ರಷ್ಟಿದೆ.
ದೇಶದಾದ್ಯಂತ ಸದ್ಯ 1,47,306 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಇದು ಒಟ್ಟು ಪ್ರಕರಣದ ಶೇ 1.36 ಆಗಿದೆ ಎಂದು ಸಚಿವಾಲಯ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.