ನವದೆಹಲಿ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಲ್ಲಿ ಕೋವಿಡ್–19 ದೃಢಪಟ್ಟ 5,600 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 5,027 ಮಂದಿ ಗುಣಮುಖರಾಗಿದ್ದಾರೆ. 111 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಈವರೆಗೂ ಸಾವಿಗೀಡಾದವರ ಸಂಖ್ಯೆ 47,357 ತಲುಪಿದೆ.
ಪ್ರಸ್ತುತ 88,537 ಸಕ್ರಿಯ ಪ್ರಕರಣಗಳಿದ್ದು, ಈವರೆಗೂ 16,95,208 ಮಂದಿ ಗುಣಮುಖರಾಗಿದ್ದಾರೆ.
ಕೇರಳದಲ್ಲಿ 6,316 ಹೊಸ ಪ್ರಕರಣಗಳು ದಾಖಲಾಗಿದ್ದು, 28 ಮಂದಿ ಮೃತಪಟ್ಟಿದ್ದಾರೆ. ಈಗ ಕೇರಳದಲ್ಲಿ 61,455 ಸಕ್ರಿಯ ಪ್ರಕರಣಗಳಿವೆ. ತಮಿಳುನಾಡಿನಲ್ಲಿ 1,428 ಹೊಸ ಪ್ರಕರಣಗಳು, ಹರಿಯಾಣದಲ್ಲಿ 1,607 ಪ್ರಕರಣಗಳು, ರಾಜಸ್ಥಾನದಲ್ಲಿ 1,990 ಪ್ರಕರಣಗಳು, ಆಂಧ್ರ ಪ್ರದೇಶದಲ್ಲಿ 663 ಪ್ರಕರಣಗಳು, ಪಂಜಾಬ್‌ನಲ್ಲಿ 604 ಪ್ರಕರಣಗಳು ದಾಖಲಾಗಿವೆ.
ಬುಧವಾರ ಬೆಳಗ್ಗಿನವರೆಗೂ ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 36,604 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 501 ಸೋಂಕಿತರು ಮೃತಪಟ್ಟಿದ್ದಾರೆ. 43,062 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಇದರೊಂದಿಗೆ, ಈವರೆಗೆ ಸೋಂಕು ತಗುಲಿದವರ ಸಂಖ್ಯೆ 94,99,414 ತಲುಪಿದ್ದು, 1,38,122 ಮಂದಿ ಮೃತಪಟ್ಟಿದ್ದಾರೆ. ಒಟ್ಟು 89,32,647 ಮಂದಿ ಚೇತರಿಸಿಕೊಂಡಿದ್ದಾರೆ.
ದೇಶದಲ್ಲೀಗ 4,28,644 ಸಕ್ರಿಯ ಪ್ರಕರಣಗಳಿವೆ.
ಡಿಸೆಂಬರ್ 1ರ ವರೆಗೆ ದೇಶದಾದ್ಯಂತ 14.24 ಕೋಟಿಗೂ ಹೆಚ್ಚು ಕೊರೊನಾ ಪರೀಕ್ಷೆ ನಡೆಸಲಾಗಿದೆ. ಮಂಗಳವಾರ 10,96,651 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.